Advertisement

ಮತ ಜಾಗೃತಿ ಮಳಿಗೆಗೆ ಚಾಲನೆ

01:01 PM Apr 15, 2019 | Team Udayavani |

ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಕ್ರಿಯವಾಗಿ ಪ್ರತಿ ಪ್ರಜೆಯೂ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಕೇಂದ್ರ ಬಸ್‌ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸ್ಥಾಪಿಸಲಾದ ‘ಮತದಾರ ಜಾಗೃತಿ ಅಭಿಯಾನ’ ಮಳಿಗೆಯನ್ನು ಜಿಲ್ಲಾ ಚುನಾವಣಾಧಿಕಾರಿ ಆರ್‌. ವೆಂಕಟೇಶಕುಮಾರ ಉದ್ಘಾಟಿಸಿದರು.

Advertisement

ಮಳಿಗೆ ವೀಕ್ಷಿಸಿ ನಂತರ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಆರ್‌.ವೆಂಕಟೇಶಕುಮಾರ, ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎನ್ನುವುದು ಚುನಾವಣಾ ಆಯೋಗದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮತದಾರರಿಗೆ ಶಿಕ್ಷಣ, ಜಾಗೃತಿ ಮೂಡಿಸಲು ಹತ್ತಾರು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಜಾಗೃತಿ ಅಭಿಯಾನ ಸೇರ್ಪಡೆಯಾಗಿದೆ ಎಂದರು.

ಮೂರು ದಿನ ಮಳಿಗೆ ಪ್ರದರ್ಶನ: ಏ. 14 ರಿಂದ 16ರ ವರೆಗೆ ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ಜಾಗೃತಿ ಅಭಿಯಾನದ ಪ್ರದರ್ಶನ ಮಳಿಗೆ ಸಾರ್ವಜನಿಕರು ಮತ್ತು ಪ್ರಯಾಣಿಕರ ವೀಕ್ಷಣೆಗೆ ಮುಕ್ತವಾಗಿದೆ. ಏ. 23 ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಡಾ|
ರಾಜಾ ಪಿ., ಮಹಾನಗರ ಪಾಲಿಕೆ ಆಯುಕ್ತೆ ಫೌಜಿಯಾ ಬಿ. ತರನ್ನುಮ್‌, ಸಹಾಯಕ ಆಯುಕ್ತ ರಾಹುಲ ತುಕಾರಾಮ ಪಾಂಡ್ವೆ, ಐ.ಎ.ಎಸ್‌. ಪ್ರೊಬೇಷನರಿ ಸ್ನೇಹಲ್‌ ಸುಧಾಕರ ಲೋಖಂಡೆ, ಈ.ಕ.ರ.ಸಾ. ಸಂಸ್ಥೆ ಅಧಿಕಾರಿಗಳು ಇದ್ದರು.

ಗಮನ ಸೆಳೆದ ರೇಖಾಚಿತ್ರಗಳು: ಮಳಿಗೆಯಲ್ಲಿ ಈ ಬಾರಿ ರೇಖಾಚಿತ್ರದಿಂದ ಮೂಡಿಸಲಾದ ಚಿತ್ರಗಳು ನೋಡುಗರ ಗಮನ ಸೆಳೆದವು. ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆಯಿಂದ ಹೊರತರಲಾದ ‘ರೇಖೆಗಳಲ್ಲಿ ಚುನಾವಣೆ-2019’ ಎನ್ನುವ ಕಿರು ಹೊತ್ತಿಗೆ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next