Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ, ಪೊಲೀಸ್, ಆರೋಗ್ಯ, ಎನ್‌ಇಕೆಆರ್ ಟಿಸಿ ಮುಂತಾದ ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಸ್ವಯಂ ಆಗಿ ಮತದಾರರ ಪಟ್ಟಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದರು.
ವಹಿಸಿ, ಶಾಲಾ-ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಮತದಾರರ ಪಟ್ಟಿ ಪರಿಶೀಲನೆ ಮಾಡಿಸಬೇಕು. ನಂತರ ಅವರ ಕುಟುಂಬ ಸದಸ್ಯರ ಪಟ್ಟಿಯನ್ನು ಪರಿಷ್ಕರಿಸಲು ತಿಳಿಹೇಳಬೇಕು ಎಂದರು. ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ಮತದಾರರಿಗೆ ತೋರಿಸಿ, ಅಗತ್ಯವಿದ್ದಲ್ಲಿ ಸಾರ್ವಜನಿಕರಿಂದ ತಿದ್ದುಪಡಿಗೆ ಪಾಸ್ ಪೋರ್ಟ್, ಚಾಲನಾ ಪರವಾನಗಿ, ಆಧಾರ್, ಪಡಿತರ ಚೀಟಿ, ಚುನಾವಣಾ ಆಯೋಗ ತಿಳಿಸಿರುವ ಇನ್ನಿತರ ಯಾವುದೇ ದಾಖಲೆಗಳ ಪೈಕಿ ಒಂದನ್ನು ಪಡೆದು ಮತದಾರರಿಂದ ದೃಢೀಕರಿಸಿಕೊಳ್ಳಬೇಕು ಎಂದು ಹೇಳಿದರು.
Related Articles
Advertisement
ಸಹಾಯಕ ಆಯುಕ್ತ ಡಾ| ಗೋಪಾಲಕೃಷ್ಣ ರಾಘವೇಂದ್ರ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು ಪ್ರಮುಖವಾಗಿ ಶಾಲಾ-ಕಾಲೇಜುಗಳು ಕೈಜೋಡಿಸುವ ಮೂಲಕ 22 ಲಕ್ಷ ಜನಸಂಖ್ಯೆಯಲ್ಲಿ ಈಗಾಗಲೇ ಮೊಬೈಲ್ ಮೂಲಕ 50 ಸಾವಿರ ಜನರ ಮತದಾರರ ಪಟ್ಟಿ ಪರಿಶೀಲನೆ ಮುಗಿದಿದೆ. ಕಲಬುರಗಿ ಜಿಲ್ಲೆಯಲ್ಲೂ ಅಷ್ಟೆ ಜನಸಂಖ್ಯೆ ಇದ್ದು, ಕಡಿಮೆ ಮತದಾರರು ತಮ್ಮ ಮತದಾರರ ಪಟ್ಟಿ ಪರಿಶೀಲನೆ ಮಾಡಿಕೊಂಡಿದ್ದಾರೆ.
ನಾವು ಕೂಡ ತುಮಕೂರಿನಂತೆ ಕೆಲಸ ಮಾಡುವ ಮೂಲಕ ಯಶಸ್ವಿಯಾಗಬೇಕು ಎಂದರು. ಶಿಷ್ಟಾಚಾರ ತಹಶೀಲ್ದಾರ್ ಪ್ರಕಾಶ ಚಿಂಚೋಳಿಕರ್ ಮಾತನಾಡಿ, ಅ. 15ರೊಳಗೆ ಮತದಾರರ ಪಟ್ಟಿ ಪರಿಶೀಲನೆ ಸಂಪೂರ್ಣ ಮುಗಿಯಬೇಕು. ನಂತರ ಮನೆಮನೆಗೆ ತೆರಳಿ ಬಿಎಲ್‌ಒ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಜಿಲ್ಲಾ ಮಾಸ್ಟರ್ ಟ್ರೆ„ನರ್ ಡಾ| ಶಶಿಶೇಖರ್ ರೆಡ್ಡಿ, ಅಂಗವಿಕಲರು 1950ಗೆ ಕರೆ ಮಾಡುವ ಮೂಲಕ ತಮ್ಮ ಮತದಾರರ ಪಟ್ಟಿ ಪರಿಷ್ಕರಿಸಬಹುದಾಗಿದೆ ಎಂದು ತಿಳಿಸಿದರು.
ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿ ಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಪಿಯುಸಿ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.