Advertisement

Kalasa: ಹೃದಯಾಘಾತದಿಂದ ಎಎಸ್‌ಐ ಸಾವು

10:26 PM Sep 24, 2023 | Team Udayavani |

ಚಿಕ್ಕಮಗಳೂರು: ಹೃದಯಾಘಾತದಿಂದ ಎಎಸ್‌ಐ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಳಸ ಪಟ್ಟಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಕಳಸ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಕೆ.ಮುರುಳೀಧರ್‌ ಮೃತಪಟ್ಟ ಪೊಲೀಸ್‌ ಅಧಿಕಾರಿ.

Advertisement

ಶನಿವಾರ ಕರ್ತವ್ಯ ನಿರ್ವಹಿಸಿದ್ದ ಮುರುಳೀಧರ್‌ ಅವರಿಗೆ ಭಾನುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು.

ಜಿ.ಕೆ. ಮುರಳೀಧರ್ ಅವರ ಅಕಾಲಿಕ ನಿಧಾನಕ್ಕೆ ಜಿಲ್ಲಾ ಪೊಲೀಸ್‌ ಸಿಬಂದಿಗಳು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಚಿಕ್ಕಮಗಳೂರು ಸೇರಿ ವಿವಿಧೆಡೆ ಠಾಣೆಗಳಲ್ಲಿ ಸೇವೆ ಸಲ್ಲಿಸಿ ಇಲಾಖೆಯಲ್ಲಿ ಉತ್ತಮ ಹೆಸರು ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next