ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಪರಿಣಾಮ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಮಂಗಳವಾರ (ಜುಲೈ16) ಹೆಬ್ಬಾಳೆ ಸೇತುವೆ ಮುಳುಗಡೆಗೊಂಡಿದೆ.
ಈ ಬಾರಿಯ ಮಳೆಗೆ ಮೊದಲ ಭಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು ಪರಿಣಾಮ ಮಂಗಳವಾರ ಹೊರನಾಡು ಕಳಸ ಸಂಪರ್ಕ ಕಡಿತಗೊಂಡಿದೆ.
ಸೋಮವಾರ ರಾತ್ರಿಯಿಂದಲೇ ಹೆಬ್ಬಾಳೆ ಸೇತುವೆ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು ಮುನ್ನೆಚ್ಚರಿ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್ ಇರಿಸಿ ವಾಹನ ಸಂಚಾರ ಬಂದ್ ಮಾಡಲಾಗಿದೆ, ಅಲ್ಲದೆ ಕಳಸ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ.
ಇದನ್ನೂ ಓದಿ: Legislative Council: ಇದು ಟ್ರೇಲರ್ ಮಾತ್ರ, ಅಭಿ ಪಿಕ್ಚರ್ ಬಾಕಿ ಹೈ: ಸಿ.ಟಿ. ರವಿ