ಚಿಕ್ಕಮಗಳೂರು : ಕಳಸ ತಾಲೂಕಿನಲ್ಲಿ ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಬುಧವಾರ (ಸೆ.11) ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಕಳಸ ಪಟ್ಟಣ ಬಂದ್ ಮಾಡಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ 10 ಗಂಟೆಯಿಂದ ಕಳಸ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಕೂಡಲೆ ಒತ್ತುವರಿ ತೆರವು ನಿಲ್ಲಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಫಿ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆ ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದು, ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳು ಹಾಗೂ ವರ್ತಕರು ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ಬಂದ್ ಗೆ ಪೂರ್ಣ ಬೆಂಬಲವನ್ನು ನೀಡಿದ್ದಾರೆ.ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.