Advertisement

ಕಲಬುರ್ಗಿ ಹತ್ಯೆ ತನಿಖೆ ಎಸ್‌ಐಟಿಗೆ

05:59 AM Feb 27, 2019 | Team Udayavani |

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ವಿಚಾರವಾದಿ ಡಾ.ಎಂ.ಎಂ. ಕಲಬುರ್ಗಿಯವರ ಹತ್ಯೆ ಪ್ರಕರಣದ ತನಿಖೆಯನ್ನು, ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವರ್ಗಾಯಿಸಿ, ಸುಪ್ರೀಂ ಕೋರ್ಟ್‌ ಆದೇಶಿಸಿದೆ.

Advertisement

ಇನ್ನು ಮುಂದೆ ಎಸ್‌ಐಟಿ ನಡೆಸುವ ತನಿಖೆಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಸಂಚಾರಿ ಪೀಠ ಮೇಲುಸ್ತುವಾರಿ ವಹಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ.  ಕಲಬರ್ಗಿ ಪತ್ನಿಯವರು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಕಲಬುರ್ಗಿ ಹಾಗೂ ಗೌರಿ ಲಂಕೇಶ್‌ ಪ್ರಕರಣಗಳಲ್ಲಿ ಸಮಾನ ಅಂಶಗಳಿರುವುದರಿಂದ ಈ ಪ್ರಕರಣಗಳನ್ನು ಒಂದೇ ತನಿಖಾ ತಂಡವೇ ನಡೆಸಬೇಕೆಂದು ಹೇಳಿದೆ. 

ಹಂಪಿ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳೂ ಆಗಿದ್ದ ಕಲಬುರ್ಗಿಯವರನ್ನು 2015ರ ಆ. 30ರಂದು ಧಾರವಾಡದ ಅವರ ನಿವಾಸದಲ್ಲಿ ಅಜ್ಞಾತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು. ಈ ಪ್ರಕರಣವನ್ನು ಕರ್ನಾಟಕ ಪೊಲೀಸ್‌ ಇಲಾಖೆಯ ಅಪರಾಧ ವಿಭಾಗ ತನಿಖೆ ನಡೆಸುತ್ತಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next