Advertisement

ಕೋವಿಡ್ ಭೀತಿ : ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಜಾತ್ರೆ, ಉರೂಸ್ ಗಳಿಗೆ ನಿಷೇಧ 

04:06 PM Mar 10, 2021 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಹಾವಳಿ ತಡೆಯಲು ಮತ್ತೆ ಬಿಗಿ ಕ್ರಮಗಳನ್ನು ಅನುಸರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಮತ್ತೆ ಜಾತ್ರೆ ಮತ್ತು ಉರೂಸ್ ಗಳಿಗೆ ನಿಷೇಧಿಸಿ ಆದೇಶಿಸಲಾಗಿದೆ‌.

Advertisement

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸೋಂಕು ಹೆಚ್ಚಾಗಿದ್ದು, ಈಗಾಗಲೇ ಜಿಲ್ಲೆಯ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವರ ಮೇಲೆ ನಿಗಾ ವಹಿಸಲಾಗಿದೆ. ಸೋಂಕಿತ ವ್ಯಕ್ತಿಗಳು ಜಿಲ್ಲೆಯೊಳಗೆ ಪ್ರವೇಶಿಸದಂತೆ ತಡೆಯಲು ಐದು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ : ‘ಇಡಿ ಕುಟುಂಬ ದುಃಖಿತವಾಗಿದೆ’ : ರಾಣಿ ಎಲಿಜಬೆತ್ ಹೇಳಿದ್ದೇನು ..?

ಇದೀಗ ಜಿಲ್ಲೆಯಲ್ಲಿ ಮುಂಬರುವ ಎಲ್ಲ ಜಾತ್ರೆಗಳು ಮತ್ತು ಉರೂಸ್ ಗಳ ಆಚರಣೆಗೆ ನಿಷೇಧ ಹೇರಲಾಗಿದೆ. ಮುಂದಿನ ಆದೇಶದವರೆಗೂ ಈ ನಿಷೇಧ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next