Advertisement
ಇಲ್ಲಿನ ಜಗತ್ ವೃತ್ತದಲ್ಲಿ ಬೆಳಗ್ಗೆ ಗುಲಬರ್ಗಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶದ ವಿವಿಧ ಕಾಲೇಜುಗಳ 1,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 500ಕ್ಕೂ ಅಧಿಕ ಪೌರ ಕಾರ್ಮಿಕರು ಸಮಾವೇಶಗೊಂಡು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ಮಾಡಿದರು.
Related Articles
Advertisement
ಗುವಿವಿ ಕುಲಪತಿ ಪ್ರೊ| ದಯಾನಂದ ಅಗಸರ ಮಾತನಾಡಿ, ಜನಜಾಗೃತಿ ಅಭಿಯಾನಕ್ಕೆ ವಿಶ್ವವಿದ್ಯಾಲಯ ಸಹಕಾರ ನೀಡಲಿದೆ. ವಿವಿ ವಿದ್ಯಾರ್ಥಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಕಳೆದ ವರ್ಷ ಸ್ವತ್ಛತಾ ರ್‍ಯಾಂಕಿಂಗ್‌ನಲ್ಲಿ ಮಹಾನಗರ ಪಾಲಿಕೆ 321ನೇ ಸ್ಥಾನ ಪಡೆದಿದೆ. ಮತ್ತಷ್ಟು ಉನ್ನತ ಸ್ಥಾನಕ್ಕೇರಬೇಕಾದರೆ ಸ್ವತ್ಛತೆ ಕಾಪಾಡುವುದು ಅವಶ್ಯವಾಗಿದ್ದು, ಇದಕ್ಕಾಗಿ ಸಾರ್ವಜನಿಕರು, ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ಕರೆ ನೀಡಿದರು.
ಉತ್ತರ ಮತ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರೊ| ರಮೇಶ ಲಂಡನಕರ್ ಮಾತನಾಡಿ, ಎನ್ ಎಸ್‌ಎಸ್ ಸ್ವಯಂ ಸೇವಕರು ಹಲವು ತಂಡಗಳಾಗಿ ಮನೆ-ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ನಗರ ಉಪ ಪೊಲೀಸ್ ಆಯುಕ್ತ ಡಿ. ಕಿಶೋರ್ ಬಾಬು, ನಾಲ್ಕು ಚಕ್ರ ಸಂಘಟನೆಯ ಮಾಲಾ ಕಣ್ಣಿ, ಮಾಲಾ ದಣ್ಣೂರ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಸೋಮವಾರದಿಂದ ಮನೆ-ಮನೆಗೆ 800 ಎನ್‌ಎಸ್‌ಎಸ್ ಸ್ವಯಂ ಸೇವಕರು ತೆರಳಲಿದ್ದಾರೆ. ಒಂದು ತಂಡದಲ್ಲಿ ನಾಲ್ವರು ಇರಲಿದ್ದಾರೆ. ಹಸಿ ಕಸ, ಒಣ ಕಸ, ಪ್ಲಾಸ್ಟಿಕ್, ಬಯಲು ಶೌಚಾಲಯದ ಬಗ್ಗೆ ಒಬ್ಬೊಬ್ಬರು ಒಂದೊಂದರ ಅರಿವು ಮೂಡಿಸಲಿದ್ದಾರೆ.ಪ್ರೊ| ರಮೇಶ ಲಂಡನಕರ್
ಎನ್‌ಎಸ್‌ಎಸ್ ಸಂಯೋಜಕ, ಗುವಿವಿ