ಕಲಬುರಗಿ: ಬೆಂಗಳೂರಿನಲ್ಲಿ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ 5 ಎಕರೆ ಜಮೀನು ಪಡೆದಿರುವುದು ಸಂಪೂರ್ಣ ಅಕ್ರಮವಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡಬೇಕು ಎಂದು ಶಾಸಕ ಬಸವರಾಜ ಮತ್ತಿ ಮಡು ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾರ್ಥ ಬಿಹಾರ ಟ್ರಸ್ಟಿಗೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಹಾಗೂ ನಿಯಮಗಳನ್ನು ಉಲ್ಲಂಘಿಸಿ ಐದು ಎಕರೆ ಭೂಮಿಯನ್ನು ಮಂಜೂರು ಮಾಡಿಸಿಕೊಳ್ಳಲಾಗಿದೆ. ಇದರಿಂದಾಗಿ ಇತರೆ ದಲಿತರ ಸಂಸ್ಥೆಗಳಿಗೆ ಅನ್ಯವು ಆಗಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದಲಿತ ವಿರೋಧಿ ಕ್ರಮವನ್ನು ಅನುಸರಿಸುತ್ತಿದೆ. ಆದ್ದರಿಂದ ಕೂಡಲೇ ನೈತಿಕ ಹೊಣ ಹೊತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಕೆಐಡಿಬಿ ಇಂದ ಭೂಮಿ ಪಡೆಯಲು ಹಲವಾರು ಜನ ಅರ್ಜಿಗಳನ್ನ ಸಲ್ಲಿಸಿದರು. ಅದರಲ್ಲಿ ಸಾಕಷ್ಟು ಜನರಿಗೆ ಭೂಮಿ ಪಡೆಯುವ ಅರ್ಹತೆ ಇತ್ತು. ಆದರೆ ಅಧಿಕಾರ ಬಲದಿಂದ ಹಾಗೂ ಶಿಫಾರಸ್ಸಿನಿಂದ ಪ್ರಿಯಾಂಕ್ ಖರ್ಗೆಯವರ ಟ್ರಸ್ಟ್ ಗೆ ಭೂಮಿ ನೀಡಲಾಗಿದೆ. ಆದ್ದರಿಂದ ಈ ಕುರಿತು ತನಿಖೆ ನಡೆಸಬೇಕು. ಮುಂದಿನ ದಿನಗಳಲ್ಲಿ ತನಿಖೆಗೆ ಒತ್ತಾಯಿಸಿ ಬಿಜೆಪಿ ಹೋರಾಟವನ್ನು ಕೂಡ ಮಾಡಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಮೂಡ ಹಗರಣ ವಾಲ್ಮೀಕಿ ಹಗರಣ ಸೇರಿದಂತೆ 10 ಹಲವಾರು ಹಗರಣಗಳಲ್ಲಿ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ. ಆದ್ದರಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ರಾಜ್ಯಪಾಲರು ಪ್ರಾಷಿಕೋಷನಿಗೆ ಅನುಮತಿ ನೀಡುತ್ತಿರುವುದು ಸಮರ್ಥನೀಯ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಜಿ ಎಂಎಲ್ಸಿ ಅಮರನಾಥ್ ಪಾಟೀಲ್, ಬಿಜೆಪಿ ನಗರ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಇತರರು ಇದ್ದರು.