ವಾಡಿ: ಡಿಸೇಲ್ ಟ್ಯಾಂಕರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಡಿಸೇಲ್ ಟ್ಯಾಂಕರ್ ಚಾಲಕ ಚಂದ್ರಕಾಂತ ಮೃತಪಟ್ಟ ವ್ಯಕ್ತಿ.
ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದು, ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಇನ್ನೋರ್ವನಿಗೆ ತೀವ್ರ ಗಾಯಗಳಾಗಿವೆ ಎನ್ನಲಾಗಿದೆ. ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮ ಲಾರಿ ನಜ್ಜುಗುಜ್ಜಾಗಿದ್ದು, ಡಿಸೇಲ್ ಟ್ಯಾಂಕರ್ ವಾಹನ ಹೆದ್ದಾರಿ ಪಕ್ಕದ ಹೊಲಕ್ಕೆ ಬಿದ್ದಿದೆ. ಸ್ಥಳಕ್ಕೆ ವಾಡಿ ಠಾಣೆ ಪಿಎಸ್ ಐ ಮಹಾಂತೇಶ ಜಿ.ಪಾಟೀಲ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.