Advertisement

Kalburgi: ಮತ್ತೆ ಪ್ರತ್ಯೇಕ ರಾಜ್ಯದ ಕೂಗು… ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ, ಹಲವರ ಬಂಧನ

11:23 AM Nov 01, 2023 | Team Udayavani |

ಕಲಬುರಗಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂಭ್ರದಲ್ಲಿರುವಾಗಲೇ ಕಲಬುರಗಿ ನಗರದಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಸೊಲ್ಲೆದ್ದಿದೆ.

Advertisement

ಪರಿಣಾಮ ಬುಧವಾರ ಸರದಾರ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ಬೆಳಗ್ಗೆ ಪ್ರತ್ಯೇಕ ರಾಜ್ಯದ ಧ್ವಜ ಹಾರಟ ಮಾಡಲು ಮುಂದಾದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಹಾಗೂ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳಿಯನ್ನು ಪೊಲೀಸರು ಬಂಧಿಸಿದರು.

ಕಳೆದ ಐದು ವರ್ಷಗಳಿಂದ ಶಾಂತವಾಗಿದ್ದ ಹೋರಾಟಗಾರರು ಬೆಳಗ್ಗೆ ಪ್ರತ್ಯೇಕ ರಾಜ್ಯ ಹೋರಾಟ ಆರಂಭಿಸುತ್ತೇವೆ ಎಂದು ಘೋಷಣೆ ಕೂಗೂತ್ತ ವೃತ್ತದತ್ತ ನುಗ್ಗಿದರು.

ಸಮಿತಿಯ ಸದಸ್ಯರು ನಗರದ ಕೋರ್ಟ್ ಸರ್ಕಲ್ ಬಳಿ ಜಮಾಗೊಂಡು ಪ್ರತ್ಯೇಕ ರಾಜ್ಯದ ಬಾವುಟದೊಂದಿಗೆ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ಮೆರವಣಿಗೆ ಹೊರಟರು.

ಸರದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ತೆರಳಿ ಅಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಮಾಡಲು ಹೋಗುತ್ತಿದ್ದವರನ್ನು ಪೊಲೀಸರು ಯುನೈಟೆಡ್ ಆಸ್ಪತ್ರೆಯ ಬಳಿ ತಡೆದು ನಿಲ್ಲಿಸಿದರು. ಮಾರ್ಗ ಮಧ್ಯದಲ್ಲಿ ೨0 ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ‌ ಕರೆದುಕೊಂಡು ಹೋದರು.

Advertisement

ಸಮಿತಿ ಅಧ್ಯಕ್ಷ ಎಂ.ಎಸ್ .ಪಾಟೀಲ್, ಮುಖಂಡರಾದ ಉದಯಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ , ಲಕ್ಷ್ಮೀ ಕಾಂತ ಸ್ಚಾದಿ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.

ಇದನ್ನೂ ಓದಿ: Karnataka Rajyotsava: ನನ್ನೂರು ಕರ್ನಾಟಕದ ಮೊದಲ ರಾಜಧಾನಿ ಬನವಾಸಿ!

Advertisement

Udayavani is now on Telegram. Click here to join our channel and stay updated with the latest news.

Next