Advertisement

ರೈತರು ಆರ್ಥಿಕವಾಗಿ ಸಬಲರಾಗಲಿ: ಎಂವೈಪಿ

03:44 PM Feb 14, 2021 | Team Udayavani |

ಅಫಜಲಪುರ: ರೈತರು ಆರ್ಥಿಕವಾಗಿ ಪ್ರಬಲರಾದಾಗ ಮಾತ್ರ ತಾಲೂಕು, ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.

Advertisement

ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಆರ್‌ಐಡಿಎಫ್‌ 23 ಯೋಜನೆ ಅಡಿಯಲ್ಲಿ 36 ಲಕ್ಷ ರೂ. ವೆಚ್ಚದ ಪಶು ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಲೂರ ಗ್ರಾಮದಲ್ಲಿ ಹಳೆಯ ಪಶು ಆಸ್ಪತ್ರೆ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ಈ ಭಾಗದ ರೈತರಿಗೆ ಬಹಳಷ್ಟು ಸಮಸ್ಯೆಯಾಗುತ್ತಿತ್ತು.
ಈಗ ನೂತನ ಕಟ್ಟಡ ನಿರ್ಮಾಣವಾಗಿದ್ದರಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ರಾಸುಗಳಿಗೆ ರೋಗ ರುಜಿನಗಳು ಬಂದಾಗ ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದರು.

ಜಿ.ಪಂ ಮಾಜಿ ಸದಸ್ಯರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ ಮಾತನಾಡಿ, ಶಾಸಕರು ಸಾವಿರಾರು ಕೋಟಿ ರೂ. ಅನುದಾನ ತಂದು
ತಾಲೂಕಿನಾದ್ಯಂತ ಅಭಿವೃದ್ಧಿ ಕೆಲಸ ಕೈಗೊಂಡಿದ್ದಾರೆ. ವಿರೋಧಿ  ಬಣದವರು ಟೀಕಿಸುವ ಬದಲು, ಕಣ್ತೆರೆದು ನೋಡಲಿ ಎಂದು ಹೇಳಿದರು.

ಪಶು ಆಸ್ಪತ್ರೆ ಉದ್ಘಾಟನೆ ಬಳಿಕ 50 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಪೌಂಡ್‌ ಗೋಡೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು. ಜಿಲ್ಲಾ ಪಶು ಸಂಗೋಪನಾ ಉಪನಿರ್ದೇಶಕ ಡಾ| ವಿ.ಎಚ್‌. ಹನುಮಂತಪ್ಪ, ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಂ.ಎಸ್‌. ಗಂಗನಳ್ಳಿ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷ ಶಂಕ್ರೆಪ್ಪ ಲಾಲು ಸಿಂಗೆ, ಮುಖಂಡರಾದ ಸಿದ್ದಾರ್ಥ ಬಸರಿಗಿಡ, ಪ್ರಕಾಶ ಜಮಾದಾರ, ಶರಣು ಕುಂಬಾರ, ನಿಂಗು ಛಲವಾದಿ, ಅ ಕಾರಿಗಳಾದ ಟಿಎಚ್‌ಒ ರತ್ನಾಕರ ತೋರಣ, ವೈದ್ಯಾಧಿ ಕಾರಿ ಡಾ| ಸುಶೀಲ ಮತ್ತಿತರರು ಇದ್ದರು.

Advertisement

ಓದಿ : ಸಿಎಂ ಗಾದಿಗೆ ಕಾಂಗ್ರೆಸ್‌ನಲ್ಲಿ ಮ್ಯೂಸಿಕಲ್‌ ಚೇರ್‌ ಆಟ

 

Advertisement

Udayavani is now on Telegram. Click here to join our channel and stay updated with the latest news.

Next