Advertisement

ಪ್ರವೀಣ್ ಹತ್ಯೆ; ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ ಕಾಳಿ ಸ್ವಾಮಿ

07:45 PM Jul 29, 2022 | Team Udayavani |

ತುಮಕೂರು: ದಕ್ಷಿಣ ಕನ್ನಡದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಹಂತಕರನ್ನು ಎನ್ಕೌಂಟರ್ ಮಾಡುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಕಡೂರಿನ ಕಾಳಿ ಮಠದ ಋಷಿಕುಮಾರ ಸ್ವಾಮಿ ಸರ್ಕಾರವನ್ನ ಒತ್ತಾಯಿಸಿದ್ದಾರೆ.

Advertisement

ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ದಕ್ಷಿಣ ಕನ್ನಡದಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದ ಅವರು ಮಾನವ ಸರಪಳಿ ನಿರ್ಮಿಸಿ ಮೌನಚರಣೆ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಇದುವರೆಗೂ 35ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಸಹ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಹಾಗಾಗಿ ಸರ್ಕಾರ ಶೀಘ್ರವಾಗಿ ಹಂತಕರನ್ನ ಬಂಧಿಸಿ ಎನ್ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಮೂರು ದಿನಗಳ ನೀಡಿರುವ ಅವರು ಮೂರು ದಿನಗಳೊಳಗೆ ಆರೋಪಿಗಳಿಗೆ ಕಠಿಣ ಕ್ರಮ ಆಗದಿದ್ದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಬೆಂಗಳೂರು ಚಲೋ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಹಲವಾರು ಹಿಂದೂ ಕಾರ್ಯಕರ್ತರ ಕಗ್ಗೊಲೆಗಳನ್ನ ನೋಡಿ ಸಾಕಾಗಿದೆ ರಾಜ್ಯದಲ್ಲಿ ಹತ್ಯೆಯಾಗಿರುವ ಎಲ್ಲಾ ಹಿಂದೂ ಕಾರ್ಯಕರ್ತರು ಅಮಾಯಕರಾಗಿದ್ದಾರೆ ಬಲಾಡ್ಯರ ಮೇಲೆ ಅವರ ಆಕ್ರೋಶವನ್ನು ಹೊರಹಾಕಲು ಕೈಲಾಗದ ಹೇಡಿಗಳು ಇಂತಹ ಕೃತ್ಯಗಳಿಗೆ ಇಳಿದಿದ್ದಾರೆ ಎಂದರು.

ಇನ್ನು ಹತ್ಯೆ ಕೋರರಿಗೆ ಎಚ್ಚರಿಕೆ ನೀಡಿರುವ ಅವರು ತಮಗೆ ಧೈರ್ಯವಿದ್ದರೆ ನನ್ನನ್ನು ಹತ್ಯೆ ಮಾಡಿ ಎಂದು ನೇರ ಸವಾಲನ್ನು ಹಾಕಿ, ರಾಜ್ಯದ ಮುಖ್ಯಮಂತ್ರಿಗಳು, ಗೃಹ ಸಚಿವರು, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರನ್ನು ಹತ್ಯೆ ಮಾಡಲು ಸಾಧ್ಯವಾ ….?ಎಂದು ಪ್ರಶ್ನೆ ಮಾಡಿರುವ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಆಕ್ರೋಶವನ್ನು ಹೊರ ಹಾಕಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next