ರಾಯಪುರ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಮತ್ತು ರಾಷ್ಟ್ರಪಿತನನ್ನು ಕೊಂದ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ರಾಯಪುರ ಪೊಲೀಸರು ಕಾಳಿಚರಣ್ ಮಹಾರಾಜ್ ಅವರನ್ನು ಬಂಧಿಸಿದ್ದಾರೆ. ಅವರನ್ನು ಖಜುರಾಹೊದಲ್ಲಿ ಬಂಧಿಸಲಾಯಿತು
ಛತ್ತೀಸ್ ಗಢದಲ್ಲಿ ಡಿಸೆಂಬರ್ 26 ರಂದು ನಡೆದ ಧರ್ಮ ಸಂಸದ್ ನಲ್ಲಿ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದ ನಾಥೂರಾಂ ಗೂಡ್ಸೆ ಅವರನ್ನು ಹೊಗಳುವಾಗ ಕಾಳಿ ಚರಣ್ ಮಹಾತ್ಮ ಗಾಂಧೀಜಿ ವಿರುದ್ದ ಅವಹೇಳನಾಕಾರಿ ಪದ ಬಳಸಿದ್ದರು.
ನೌಪದ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿರುವ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ವಿರುದ್ಧ ಕಾಳಿಚರಣ್ ಸ್ವಾಮೀಜಿ ಬಳಸಿರುವ ಪದ ತುಂಬಾ ನೋವುಂಟು ಮಾಡಿದೆ ಎಂದು ಹೇಳಿದ್ದರು.
ಇದನ್ನೂ ಓದಿ:ಶೀಘ್ರ ದೇಗುಲ ಸ್ವತಂತ್ರ: ದೇವಾಲಯಗಳನ್ನು ನಿಯಂತ್ರಣ ಕಾಯ್ದೆಗಳಿಂದ ಮುಕ್ತಗೊಳಿಸಲು ಚಿಂತನೆ
ಕಾಳಿಚರಣ್ ಮಹಾರಾಜ್ ವಿರುದ್ಧ ಕೋಮು ಪ್ರಚೋದನೆ ಮತ್ತಿತರ ದುರುದ್ದೇಶಪೂರಿತ ಭಾಷಣ ಮತ್ತು ಐಪಿಸಿ ಸೆಕ್ಷನ್ 294,295ಎ. 298, 505 (2) ಮತ್ತು 506(2) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.