Advertisement

ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಹಬ್ಬದ ಸಂಭ್ರಮ

04:25 PM Jan 21, 2023 | Team Udayavani |

ಕೋಲಾರ: ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವುದರ ಜತೆಗೆ ಸಂಭ್ರಮದಿಂದ ಕಲಿಕೆಗೆ ಮಾರ್ಗದರ್ಶನ ನೀಡುವ ಕಲಿಕಾ ಹಬ್ಬ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಹೆಚ್ಚುಸುವಲ್ಲಿ ಸಹಕಾರಿಯಾಗಿದೆ ಎಂದು ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸಿ.ಎನ್‌.ಪ್ರದೀಪ್‌ಕುಮಾರ್‌ ತಿಳಿಸಿದರು.

Advertisement

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ಲಸ್ಟರ್‌ವ್ಯಾಪ್ತಿ ಕಲಿಕಾ ಹಬ್ಬದ ಸಮಾರೋಪದಲ್ಲಿ ಮಾತನಾಡಿದರು.2 ದಿನಗಳ ಕಲಿಕಾ ಹಬ್ಬ ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚುಸುವಲ್ಲಿ ಪರಿಣಾಮಕಾರಿಯಾಗಿದೆ. ತರಗತಿ ಕೋಣೆಯಲ್ಲಿ ಒತ್ತಡಮುಕ್ತವಾಗಿ ಸಂಭ್ರಮದಿಂದ ಕಲಿಯಬಹುದು ಎಂಬುದಕ್ಕೆ ಸಾಕ್ಷಿ ಎಂದರು.

ಪಠ್ಯ ಕಲಿಕೆಗೆ ನಿರಾಸಕ್ತಿ ತೋರುವ ಮಕ್ಕಳಲ್ಲಿ ಸಡಗರದಿಂದ ಕಲಿಯಲು ಆಸಕ್ತಿ ಹೆಚ್ಚಿಸಲು ಪ್ರೋತ್ಸಾಹ ನೀಡುವಲ್ಲಿ ಯಶಸ್ವಿಯಾ ಗಿದ್ದು, ಮಕ್ಕಳಲ್ಲಿ ಜೀವನ ಕೌಶಲ್ಯವೃದ್ಧಿಗೂ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಲಿಕಾ ಹಬ್ಬದಲ್ಲಿ 4ನೇ ತರಗತಿಯಿಂದ 9ನೇ ತರಗತಿವರೆಗೆ 15 ಶಾಲೆಗಳ ಒಟ್ಟು 120 ಮಕ್ಕಳು ಪಾಲ್ಗೊಂಡಿದ್ದಾರೆ. ಹಾಡು-ಆಡು, ವೈಜ್ಞಾನಿಕ ಮಾಹಿತಿ ನೀಡುವ ಮಾಡು-ಆಡು, ಸೃಜನಶೀಲತೆ ಬೆಳೆಸುವ ಕಾಗದ-ಕತ್ತರಿ, ಜ್ಞಾನಾಭಿವೃದ್ಧಿಗೆ ಊರು ಸುತ್ತೋಣ ಎಂಬ ನಾಲ್ಕು ಹಂತಗಳಲ್ಲಿ ಕಲಿಕಾ ಹಬ್ಬ ನಡೆದಿದ್ದು, ಮಕ್ಕಳು ಅತ್ಯಂತ ಸಂಭ್ರಮದಿಂದ ಪಾಲ್ಗೊಂಡಿದ್ದರು. ಇದು ಮಕ್ಕಳಲ್ಲಿ ನವಚೈತನ್ಯ ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಸೌಮ್ಯಲತಾ ಮಾತನಾಡಿ, ತರಗತಿ ಕೋಣೆಯಲ್ಲೂ ಹಬ್ಬದ ವಾತಾವರಣದಲ್ಲಿ ಪ್ರತಿದಿನ ಮಕ್ಕಳು ಕಲಿಯುವಂತೆ ಮಾಡಿದ್ದೇವೆ ಎಂಬ ಸಂದೇಶವನ್ನು ಸಮುದಾಯಕ್ಕೆ ತಲುಪಿಸಲು ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಕೋವಿಡ್‌ಹಿನ್ನಲೆ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ಸರ್ಕಾರ ಜಾರಿಗೆ ತಂದ “ಕಲಿಕಾ ಚೇತರಿಕೆ’ಯ ಭಾಗವೇ ಕಲಿಕಾ ಹಬ್ಬವಾಗಿದೆ ಎಂದರು.

Advertisement

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಎ.ಮಹೇಂದ್ರ,ಮಾಡು-ಆಡು ಹಂತದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಶಿಲ್ಪಾ, ಜಗನ್ನಾಥ್‌, ಕೆ.ಎನ್‌.ರಮೇಶ್‌, ಕಲಿಕಾ ಹಬ್ಬದ ಕುರಿತು ತಮ್ಮ ಅನಿಸಿಕೆಹಂಚಿಕೊಂಡರು. ಕಾಗದ-ಕತ್ತರಿ ವಿಭಾಗದ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಶಿಕ್ಷಕ ತೇರಹಳ್ಳಿ ನಾರಾಯಣಸ್ವಾಮಿ, ಮಕ್ಕಳಿಗೆ ಕಾಗದ ಕತ್ತರಿಸಿ ವಿವಿಧ ಆಕಾರಗಳನ್ನು ಸೃಷ್ಟಿಸುವುದನ್ನು ಕಲಿಸಿದರು.

ಸಂಪನ್ಮೂಲ ವ್ಯಕ್ತಿ ವೆಂಕಟರೆಡ್ಡಿ, ಶಿಕ್ಷಕರಾದ ಸಿದ್ದೇಶ್ವರಿ, ಗೋಪಾಲಕೃಷ್ಣ, ಶ್ವೇತಾ, ಸುಗುಣಾ, ಫರೀದಾ, ಲೀಲಾ, ಚೈತ್ರಾ, ವಿವಿಧ ಶಾಲೆಗಳ ಶಿಕ್ಷಕರಾದ ಇಬ್ರಾಹಿಂ, ಪದ್ಮಾವತಿ, ಉದಯಕುಮಾರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next