Advertisement

‘ಕಲಿಯುತ್ತಾ ನಲಿಯೋಣ’ ಜ.11ರಿಂದ ಆಕಾಶವಾಣಿ‌ಯಲ್ಲಿ ವಿನೂತನ ಕಾರ್ಯಕ್ರಮ: ಸುರೇಶ್ ಕುಮಾರ್‌

09:27 AM Jan 09, 2021 | Team Udayavani |

ಬೆಂಗಳೂರು: ಶಿಕ್ಷಣ ಇಲಾಖೆಯು ಆಕಾಶವಾಣಿ ಮೂಲಕ ಜನವರಿ 11 ರಿಂದ “ಕಲಿಯುತ್ತಾ ನಲಿಯೋಣ” ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ‌ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹೇಳಿದ್ದಾರೆ.

Advertisement

ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜನವರಿ 11ರಿಂದ ಏಪ್ರಿಲ್ 5  ರವರೆಗೆ  ಆಕಾಶವಾಣಿ ಪ್ರಸಾರ ಮಾಡಲಿದೆ.

ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ ಬೆಳಿಗ್ಗೆ 10 ಗಂಟೆಯಿಂದ 10.15 ರವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ‌ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಚಿವರು ವಿವರಿಸಿದ್ದಾರೆ.

ಇದನ್ನೂ ಓದಿ:ಆಯುರ್ವೇದ ಆಸ್ಪತ್ರೆಗಳು ಆಯುಷ್ಮಾನ್‌ ವ್ಯಾಪ್ತಿಗೆ: ಶ್ರೀಪಾದ

ಈ ಕಾರ್ಯಕ್ರಮಗಳ ಮೂಲಕ ನಲಿ – ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ. ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸಲಾಗುತ್ತದೆ. ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

Advertisement

ಅಲ್ಲಿ ಪ್ರಸಾರಗೊಳ್ಳುವ ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ.

ಮಕ್ಕಳು ಹೇಳಿದ ಕತೆಗಳೂ ಪ್ರಸಾರ: ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ ವಾಟ್ಸಾಪ್ ನಂಬರ್  9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ.

Advertisement

Udayavani is now on Telegram. Click here to join our channel and stay updated with the latest news.

Next