Advertisement

Tollywood: ಪ್ರಭಾಸ್‌ ಕಲ್ಕಿ ಹವಾ ಜೋರು

11:05 AM Jun 26, 2024 | Team Udayavani |

ಪ್ರಭಾಸ್‌ ನಟನೆಯ ಕಲ್ಕಿ 2898 ಎಡಿ ಚಿತ್ರ ಜೂ.27ರಂದು ತೆರೆಕಾಣುತ್ತಿದೆ. ಸುಮಾರು 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ.

Advertisement

ಪ್ರಭಾಸ್‌ (Prabhas) ಜೊತೆಗೆ ಅಮಿತಾಬ್‌ ಬಚ್ಚನ್‌, ದೀಪಿಕಾ ಪಡುಕೋಣೆ, ಕಮಲ್‌ಹಾಸನ್‌ ಸೇರಿದಂತೆ ಬೃಹತ್‌ ತಾರಾಬಳಗವೊಂದಿರುವ ಈ ಚಿತ್ರದ ಮೇಲೆ ಭರ್ಜರಿ ನಿರೀಕ್ಷೆ ಇದೆ. ಇದೇ ಕಾರಣದಿಂದ ಈ ವಾರ (ಜು.28)ಕ್ಕೆ ಕನ್ನಡ ಸೇರಿದಂತೆ ಯಾವುದೇ ಭಾಷೆಯಲ್ಲೂ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಬಹುತೇಕ ಎಲ್ಲಾ ಚಿತ್ರಮಂದಿರಗಳನ್ನು “ಕಲ್ಕಿ’ ಆವರಿಸಿದೆ.

“ಸಲಾರ್‌’ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಪ್ರಭಾಸ್‌ ಸಿನಿಮಾವಿದು. ಈ ಎಲ್ಲಾ ಕಾರಣದಿಂದ ಬಿಗ್‌ ಬಜೆಟ್‌ ಹಾಗೂ ಸ್ಟಾರ್‌ ಸಿನಿಮಾ ಮುಂದೆ ಬರೋದು ಬೇಡ ಎಂಬ ನಿರ್ಧಾರಕ್ಕೆ ಚಿತ್ರತಂಡಗಳು ಬಂದಿವೆ. ಹಾಗಾಗಿ, ಸದ್ಯ ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ … ಹೀಗೆ ಬಹುತೇಕ ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಪ್ರಭಾಸ್‌ “ಕಲ್ಕಿ’ ಸಿನಿಮಾದ್ದೇ ಹವಾ ಜೋರಾಗಿದೆ.

ಮೊದಲೇ ಹೇಳಿದಂತೆ ಬಹುತೇಕ ಎಲ್ಲಾ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳ ಶೋಗಳನ್ನು “ಕಲ್ಕಿ’ ಆವರಿಸಿದೆ. ತೆಲುಗು ವರ್ಶನ್‌ವೊಂದೇ 2500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಹಿಂದಿ ಅವೃತ್ತಿ 3500 ಸ್ಕ್ರೀನ್‌ಗಳಲ್ಲಿ ತೆರೆಕಾಣುತ್ತಿದೆ. ಉಳಿದಂತೆ ಬೇರೆ ಬೇರೆ ಭಾಷೆಯ ಸ್ಕ್ರೀನ್‌ ಗಳು ಸೇರಿದರೆ ಎಂಟು ಸಾವಿರಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಚಿತ್ರ ತೆರೆಕಾಣಲಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ಭಾರತವೊಂದರಲ್ವಲೇ 45 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್‌ ಮಾಡಲಿದೆ ಎನ್ನುವುದು ಸಿನಿಪಂಡಿತರ ಲೆಕ್ಕಾಚಾರ.

ಈಗಾಗಲೇ 5 ಲಕ್ಷಕ್ಕೂ ಅಧಿಕ ಟಿಕೆಟ್‌ ಮಾರಾಟವಾಗಿದ್ದು, ಇದರಿಂದಲೇ 15 ಕೋಟಿ ರೂಪಾಯಿಗೂ ಅಧಿಕ ಹಣ ಬಂದಿದೆ ಎನ್ನಲಾಗಿದೆ. ಜೊತೆಗೆ ಅಮೆರಿಕಾದಲ್ಲೂ ಸಿನಿಮಾ ಅಡ್ವಾನ್ಸ್‌ ಬುಕ್ಕಿಂಗ್‌ ಜೋರಾಗಿದ್ದು, ಇದರಿಂದಲೂ ಕೋಟಿಗಟ್ಟಲೇ ಹಣ ಸಂಗ್ರಹವಾಗಿದೆ.

Advertisement

ಸದ್ದು  ಮಾಡಿದ ಟ್ರೇಲರ್‌:  ಈಗಾಗಲೇ ಬಿಡುಗಡೆ ಆಗಿರುವ ಚಿತ್ರದ ಟ್ರೇಲರ್‌ ಸಾಕಷ್ಟು ಸದ್ದು ಮಾಡುತ್ತಿದೆ. ವಿಭಿನ್ನ ಬಗೆಯ ಪ್ರಪಂಚವನ್ನೇ ತೋರಿಸಿದ್ದಾರೆ ನಿರ್ದೇಶಕರು. ಕಾಶಿಯನ್ನು ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ಅದರ ಉಳಿವಿಗಾಗಿ ನಡೆಯುವ ಹೋರಾಟವಿದು. ದೃಶ್ಯವೈಭವವೇ ಇಡೀ ಟ್ರೇಲರ್‌ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್‌. ಹಿನ್ನೆಲೆ ಸಂಗೀತ, ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ ಈ ಸಿನಿಮಾ ಮೂಡಿಬಂದಿದೆ. “ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್‌ ಅಶ್ವಿ‌ನ್‌(Nag Ashwin) ನಿರ್ದೇಶನ ಮಾಡಿದ್ದಾರೆ. ತಾರಾಗಣದಲ್ಲಿ ಅಮಿತಾಬ್‌ ಬಚ್ಚನ್‌, ಕಮಲ್‌ ಹಾಸನ್‌, ಪ್ರಭಾಸ್‌, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

ವೈಜಯಂತಿ ಮೂವೀಸ್‌ ಬಂಡವಾಳ ಹೂಡಿದೆ. ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್‌ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅವಧಿ 3 ಗಂಟೆ 5 ನಿಮಿಷ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next