ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ಗುರುವಾರ (ಜೂ.23)ನಡೆದಿದೆ.
ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.
ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾಳೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ:ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಪಡೆದ ವಿದ್ಯಾರ್ಥಿನಿ
ಆರಾಧ್ಯ ಮಾಣಿಯ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ಸಾವಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥವಾಗಿ ಶಾಲೆಗೆ ಗುರುವಾರ ರಜೆ ಘೋಷಿಸಿದ್ದಾರೆ.