ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಪದೇ ಪದೇ ಮುಸ್ಲಿಮರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಆರ್ ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಮತ್ತೆ ಮತ್ತೆ ಮುಸ್ಲಿಮರೇ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಇದೇ ಸ್ಥಿತಿ ಉಳ್ಳಾಲದಲ್ಲೂ ಆರಂಭವಾಗಿದೆ ಎಂದರು.
ಇದನ್ನೂ ಓದಿ:ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ
ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕುತ್ತಿದ್ದು ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಕೆಸಲವಾಗಿದೆ. ಹಾಗಾಗಿ ಈಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: 9ನೇ ತರಗತಿ, ಪ್ರಥಮ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ