Advertisement
ದ.ಕ. ಜಿಲ್ಲೆಯಲ್ಲಿ ಎಷ್ಟು ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸರಕಾರದ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ ಹಾಗೂ ಎಷ್ಟು ಶಾಲೆಗಳನ್ನು ಕೈಬಿಡಲಾಗಿದೆ ಎಂಬ ಬಗ್ಗೆ ಕಾಂಗ್ರೆಸ್ ಸದಸ್ಯೆ ಮಮತಾ ಗಟ್ಟಿ ಅವರು ಶಿಕ್ಷಣ ಇಲಾಖೆಯಿಂದ ವಿವರ ಕೋರಿದರು. ಇದಕ್ಕೆ ಉತ್ತರಿಸಿದ ಶಿಕ್ಷಣಾಧಿಕಾರಿಯವರು ಜಿಲ್ಲೆಯಲ್ಲಿ 1,098 ಸರಕಾರಿ ಹಾಗೂ 333 ಅನುದಾನಿತ ಸೇರಿದಂತೆ 1,423 ಶಾಲೆಗಳಿವೆ. ಇದರಲ್ಲಿ ಕಲ್ಲಡ್ಕದ ಶ್ರೀರಾಮ ಶಾಲೆ ಹಾಗೂ ಪುಣಚದ ಶ್ರೀದೇವಿ ಶಾಲೆ ಸರಕಾರದ ಅಕ್ಷರ ದಾಸೋಹ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ ಪಡೆಯುತ್ತಿಲ್ಲ. ಸುಬ್ರಹ್ಮಣ್ಯದ ಎರಡು ಸರಕಾರಿ ಶಾಲೆಗಳಿಗೆ ಶ್ರೀಕ್ಷೇತ್ರ ಸುಬ್ರಹ್ಮಣ್ಯದಿಂದ ಊಟ ಸರಬರಾಜಾಗುತ್ತಿದೆ ಎಂದು ಉತ್ತರಿಸಿದರು.
Related Articles
Advertisement
ಒಂದು ವಿಷಯದ ಮೇಲೆ ಎರಡು ನಿರ್ಣಯಗಳನ್ನು ಮಾಡಲು ಜಿಲ್ಲಾ ಪಂಚಾಯತ್ ನಿಯಮದಲ್ಲಿ ಅವಕಾಶವಿಲ್ಲ. ನಿರ್ಣಯಕ್ಕೆ ಪರ-ವಿರೋಧಗಳನ್ನು ದಾಖಲಿಸಿಕೊಳ್ಳಬಹುದಾಗಿದೆ ಎಂದು ಜಿ.ಪಂ. ಸಿಇಒ ಡಾ| ಎಂ.ಆರ್. ರವಿ ವಿವರಿಸಿದರು.ಶ್ರೀ ಕ್ಷೇತ್ರ ಕೊಲ್ಲೂರಿನಿಂದ ಕಲ್ಲಡ್ಕ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡಿದ ಮೊತ್ತದಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಚಂದ್ರಪ್ರಕಾಶ್ ಶೆಟ್ಟಿ ಅವರು ಆರೋಪಿಸಿದಾಗ ಇದನ್ನು ದಾಖಲೆ ಸಮೇತ ಸಾಬೀತುಪಡಿಸುವಂತೆ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ಸ್ಥಾಯಿಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರು ಸವಾಲೆಸೆದರು. ವಾದ ವಿವಾದಗಳು ತೀವ್ರಗೊಂಡಾಗ ಅಧ್ಯಕ್ಷರು ಸಭೆಯನ್ನು ಅರ್ಧ ತಾಸು ಮುಂದೂಡಿ ದರು. ಮತ್ತೆ ಕಲಾಪ ಆರಂಭಗೊಂಡಾಗಲೂ ವಾಗ್ವಾದಗಳು ಮುಂದುವರಿದಾಗ ಸಭೆಯನ್ನು ಮತ್ತೆ ಭೋಜನ ವಿರಾಮಕ್ಕೆ ಮುಂದೂಡಿದರು. ಭೋಜನ ಬಳಿಕ ವಾದ ವಿವಾದಗಳು ಮುಂದುವರಿದು ಬಳಿಕ ಅಂತಿಮವಾಗಿ ವಿಷಯಕ್ಕೆ ಸಂಬಂಧಪಟ್ಟು ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ನಿರ್ಧರಿಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾಹುಲ್ ಹಮೀದ್, ಸರ್ವೋತ್ತಮ ಗೌಡ ಅವರು ಉಪಸ್ಥಿತರಿದ್ದರು. ಸಂಪ್ಯ ಠಾಣಾ ಪೊಲೀಸ್ ಅಧಿಕಾರಿ ವಿರುದ್ಧ ಖಂಡನಾ ನಿರ್ಣಯ
ಇತ್ತೀಚೆಗೆ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ತಾ.ಪಂ. ಅಧ್ಯಕ್ಷರು ಸೇರಿದಂತೆ ಮಹಿಳಾ ಜನಪ್ರತಿನಿಧಿಗಳು ಹಾಗೂ ಮಹಿಳೆಯರ ಬಗ್ಗೆ ಸಂಪ್ಯ ಪೊಲೀಸ್ ಠಾಣಾ ಎಸ್‌ಐ ಅವಮಾನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಎಸ್‌ಪಿ, ಜಿಲ್ಲಾಧಿಕಾರಿ, ರಾಜ್ಯ ಎಡಿಜಿಪಿ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮ ಆಗಿಲ್ಲ. ಎಸ್‌ಐ ನಡವಳಿಕೆಗೆ ಖಂಡನೆ ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿ.ಪಂ.ನಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಸದಸ್ಯರಾದ ಶಯನ ಜಯಾನಂದ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸ್ಥಾಯೀ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಕೋರಿದರು. ಇದರಂತೆ ನಿರ್ಣಯ ಕೈಗೊಳ್ಳಲಾಯಿತು.