Advertisement

ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜು: ಶೈಕ್ಷಣಿಕ ಸಹಮಿಲನ ಉದ್ಘಾಟನೆ

02:25 AM Jul 17, 2017 | Karthik A |

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ದ.ಕ.  ಜಿಲ್ಲಾ ಘಟಕದ ಆಶ್ರಯದಲ್ಲಿ ಜು.15ರಂದು ಕಲ್ಲಡ್ಕ ಶ್ರೀರಾಮ ಪ.ಪೂ. ವಿಭಾಗದ ಅಜಿತಕುಮಾರ್‌ ಸಭಾಂಗಣದಲ್ಲಿ ನಡೆದ ಕಾಲೇಜು ವಿಭಾಗದ ಶೆ„ಕ್ಷಣಿಕ ಸಹಮಿಲನ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ವಿಪಕ್ಷ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌ ಉದ್ಘಾಟಿಸಿದರು.

Advertisement

ರಾಷ್ಟ್ರದ ಮಾನ ಸಮ್ಮಾನದ ಗೌರವದ ಜವಾಬ್ದಾರಿ ಶಿಕ್ಷಕರದ್ದು. ಭಾರತ ಎದುರಿಸುತ್ತಿರುವ ಎಲ್ಲ ಸವಾಲುಗಳಿಗೆ ಶಿಕ್ಷಣದಲ್ಲಿ ಭಾರತೀಯತೆ ಪರಿಹಾರವಾಗಬಲ್ಲದು ಎಂದರು. ಜಿಲ್ಲಾ ಕಾರ್ಯದರ್ಶಿ ಲೋಕಯ್ಯ ಡಿ. ಸ್ವಾಗತಿಸಿ, ಪ್ರಸ್ತಾವನೆಗೈದು ವಿದ್ಯಾಭಾರತಿಯ ಮೂಲ ನಂಬಿಕೆ, ಧ್ಯೇಯ- ಉದ್ದೇಶಗಳ ಈಡೇರಿಕೆಗೆ ಮೂಲಭೂತ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಭಾರತದ ರಾಷ್ಟ್ರೀಯ ಸುರಕ್ಷತೆಗೆ ಚೀನದ ಸವಾಲುಗಳು ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಪ್ರಚಾರ ಪ್ರಮುಖ್‌ ಪ್ರದೀಪ ಮೈಸೂರು ವಿಶೇಷ ಉಪನ್ಯಾಸ ನೀಡಿ ಚೀನದಿಂದ ಆಗುವ ಅಪಾಯ ಮತ್ತು ಪರಮ ಶತ್ರುವಾಗಿ ಬೆಳೆಯುತ್ತಿರುವುದಕ್ಕೆ ನಮ್ಮದೇ ಆರ್ಥಿಕ ಪ್ರೋತ್ಸಾಹವೇ ಕಾರಣ ಎಂಬುದನ್ನು ಮನಗಾಣಬೇಕಾಗಿದೆ ಎಂದವರು ತಿಳಿಸಿದರು.

ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷ ಡಾ| ಪ್ರಭಾಕರ ಭಟ್‌, ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ  ಮತ್ತಿತರರು ಉಪಸ್ಥಿತರಿದ್ದರು. ಕಲ್ಲಡ್ಕ ರಾಮ ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಯತಿರಾಜ್‌ ಕಾರ್ಯಕ್ರಮ ನಿರ್ವಹಿಸಿ, ಪದವಿಪೂರ್ವ ವಿಭಾಗದ ಪ್ರಾಂಶುಪಾಲ ವಸಂತ ಬಲ್ಲಾಳ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next