Advertisement

ಮದುವೆಗೆ ತೆರಳಿದವರು ಮಸಣ ಸೇರಿದರು! ಕಲ್ಲಪ್ಪಳ್ಳಿ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆ

03:49 PM Jan 03, 2021 | Team Udayavani |

ಸುಳ್ಯ: ಪುತ್ತೂರು ಕಡೆಯಿಂದ ಸುಳ್ಯದ ಆಲೆಟ್ಟಿ ಮೂಲಕ ಕೇರಳದ ಪಾಣತ್ತೂರು ಕರಿಕೆ ಕಡೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಪಾಣತ್ತೂರು ಬಳಿ ಪಲ್ಟಿಯಾಗಿದ್ದು, ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

Advertisement

ಮೃತರನ್ನು ರಾಜೇಶ್, ರವಿಚಂದ್ರ, ಆದರ್ಶ್, ಶ್ರೇಯಸ್, ಸುಮತಿ, ಶಶಿ ಮತ್ತು ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಮಕ್ಕಳು.

ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಚನಿಲ ಕೊಗ್ಗು ನಾಯ್ಕ‌ಅವರ ಪುತ್ರಿಯ‌‌ ಮದುವೆ ಇಂದು ಪಾಣತ್ತೂರು ಬಳಿಯ ಕೊಡಗು ಜಿಲ್ಲಾ ವ್ಯಾಪ್ತಿಯ ಕರಿಕೆ ‌ ಎಂಬಲ್ಲಿ ವರನ ಮನೆಯಲ್ಲಿ ನಿಗದಿಯಾಗಿತ್ತು.

ಈ ಕಾರ್ಯಕ್ರಮಕ್ಕೆ ವಧುವಿನ ಊರಾದ ಈಶ್ವರ ಮಂಗಲದಿಂದ ದಿಬ್ಬಣ ಹೋಗುತ್ತಿತ್ತು. ವಧು ಮತ್ತು ಇತರರು ಟಿಟಿ ವಾಹನದಲ್ಲಿ ಹೋಗುತ್ತಿದ್ದರು. ಹಿಂದಿನಿಂದ ಖಾಸಗಿ ಬಸ್ ನಲ್ಲಿ 60 ಕ್ಕೂ ಹೆಚ್ಚು ಮಂದಿ ಹೋಗುತ್ತಿದ್ದರು.

Advertisement

ಕಲ್ಲಪ್ಪಳ್ಳಿ – ಪಾಣತ್ತೂರು ಮಧ್ಯೆ ಪೆರಿಯಾರಂ ಎಂಬಲ್ಲಿ ಇಳಿಜಾರಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಉರುಳಿ ಬಿದ್ದು ದುರಂತ ಸಂಭವಿಸಿದೆ.

ಇದನ್ನೂ ಓದಿ:ಮನೆಯ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್: ಮಗು ಸೇರಿ ಐವರು ಸಾವು

35 ಮಂದಿಯನ್ನು ಕಾಞಂಗಾಡ್ ಆಸ್ಪತ್ರೆಗೆ, 11 ಮಂದಿಯನ್ನು ಮಂಗಳೂರು ಆಸ್ಪತ್ರೆಗೂ ದಾಖಲಿಸಲಾಗಿದ್ದು, ಈ ಪೈಕಿ ಹತ್ತಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಕೇರಳ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ‌. ಘಟನೆಯ ತನಿಖೆಗೆ ಕೇರಳ ಸಾರಿಗೆ ಮಂತ್ರಿ ಆದೇಶಿಸಿದ್ದು, ಕಾಸರಗೋಡು ಜಿಲ್ಲಾಧಿಕಾರಿಯವರು ಕಾಞಂಗಾಡ್ ಸಹಾಯಕ ಕಮೀಷನರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next