Advertisement

ಕೈಗಾರಿಕೆ ಅಭಿವೃದ್ಧಿಗೆ ಹೆಚ್ಚು ಒತ್ತು: ಶೆಟ್ಟರ

11:58 AM Nov 23, 2019 | |

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಿಂದುಳಿದ ಭಾಗವಾಗಿದ್ದು, ಈ ಭಾಗದ ಆರ್ಥಿಕ ಪ್ರಗತಿಗೆ ಆಹಾರ ಮತ್ತು ಕೃಷಿ, ಕೃಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ನಗರದ ಎಚ್‌ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಹೈದರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಗುಲಬರ್ಗಾ ದಾಲ್‌ ಮಿಲ್ಲರ್ಸ್‌ ಅಸೋಷಿಯೇಸನ್‌ ಮತ್ತು ಗುಲಬರ್ಗಾ ಕೈಗಾರಿಕಾ ಪ್ರದೇಶ ಉತ್ಪಾದಕರ ಸಂಘ, ಗುಲಬರ್ಗಾ ಕೈಗಾರಿಕಾ ಮ್ಯಾನುಫ್ಯಾಕ್ಚರ್ ಅಸೋಷಿಯೇಷನ್ಸ್‌ ಸಂಯುಕ್ತಾಶ್ರಯದಲ್ಲಿ ನಡೆದ ರಫ್ತು, ವಿದೇಶ ವ್ಯಾಪಾರ ನೀತಿ ಮತ್ತು ಕಾರ್ಯವಿಧಾನಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಸಂವಾದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕೈಗಾರಿಕೆ ಅಭಿವೃದ್ಧಿಗಾಗಿ ಹಾಗೂ ಕಂದಾಯ ವಸೂಲಿಯಲ್ಲಿ ಹೊಸ ನಿಯಮ ಜಾರಿಗೊಳಿಸುವ ಮೂಲಕ ಕೈಗಾರಿಗಳ ಉನ್ನತಿಗೆ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ಈಗಾಗಲೇ ಅಧಿ ಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು. ಕೈಗಾರಿಕೆ ಕಟ್ಟಡಗಳ ಬಾಡಿಗೆ, ಮಾರಾಟಕ್ಕೆ ಮತ್ತು ಕಂದಾಯ ವಸೂಲಿಗೆ ಸಂಬಂ ಧಿಸಿದಂತೆ ವೈಜ್ಞಾನಿಕ ದರ ನಿಗದಿ ಮಾಡುವ ಮೂಲಕ ಹಾಗೂ ಎಲ್ಲ ಕೈಗಾರಿಗಳ ಉನ್ನತಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ಶ್ರಮಿಸುವುದಾಗಿ ತಿಳಿಸಿದರು.

ಬೆಂಗಳೂರನ್ನು ಹೊರತುಪಡಿಸಿ ಆರ್ಥಿಕವಾಗಿ ಹಿಂದುಳಿದಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹೊಸ ಕೈಗಾರಿಕಾ ನೀತಿಯಲ್ಲಿ ಸೇರಿಸಲಾಗುವುದು. ಕೈಗಾರಿಕಾ ಸಂಸ್ಥೆಯವರು ಸಲ್ಲಿಸಿರುವ ಮನವಿ ಪತ್ರಗಳನ್ನು ಪರಿಶೀಲಿಸಿ, ಅವುಗಳನ್ನು ಪ್ರಾಮಾಣಿಕವಾಗಿ ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳು ಆರ್ಥಿಕವಾಗಿ ಸದೃಢವಾಗಲಿದೆ. ಇಲ್ಲಿನ ಕಪನೂರು ಕೈಗಾರಿಕಾ ಪ್ರದೇಶಕ್ಕೆ ತಾವು ಭೇಟಿ ನೀಡಿದ್ದು, ಅಲ್ಲಿನ ಕೈಗಾರಿಕೆಗಳ ಅಭಿವೃದ್ಧಿಗೆ ಮಾರಕವಾಗಿರುವ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

Advertisement

ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಣಾ ಅಧಿ ಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಎಚ್‌. ಬಸವರಾಜೇಂದ್ರ, ಕೆಎಸ್‌ ಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ ಬಿ. ಶಿರೂರ್‌, ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ, ಕೆಎಎಸ್‌ ಎಸ್‌ಐಎ ಅಧ್ಯಕ್ಷ ರಾಜು ಆರ್‌. ಹಾಗೂ ಕೈಗಾರಿಕೆ ಇಲಾಖೆ ಹಿರಿಯ ಅ ಧಿಕಾರಿಗಳು, ಕೈಗಾರಿಕಾ ಸಂಸ್ಥೆಯ ಮಾಲೀಕರು ಹಾಗೂ ಉದ್ದಿಮೆದಾರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next