Advertisement

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ದ: ಅಂಬಾರಾಯ

02:50 PM Sep 16, 2022 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಂಬಾರಾಯ ಅಷ್ಟಗಿ ಹೇಳಿದರು.

Advertisement

ನಗರದ ರೇಶ್ಮಿ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ನಡೆದ ವಿಮೋಚನಾ ಸಪ್ತಾಹ ಪ್ರಯುಕ್ತ ಚಿಂತನ-ಮಂಥನ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾನತಾಡಿದರು.

“ಹೈದ್ರಾಬಾದ್‌ ಕರ್ನಾಟಕ’ ಹೆಸರನ್ನು “ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿದ ಕರ್ನಾಟಕದ ಅಭಿವೃದ್ಧಿ ಹರಿಕಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಭಾಗದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು. ಆದ್ದರಿಂದ ಹೊಸ ಹೆಸರು ನೀಡಿ ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ರೂಪರೇಷೆ ಹಾಕಿಕೊಂಡಿದ್ದರು. ಕೆಕೆಆರ್‌ಡಿಬಿ ಮಂಡಳಿಗೆ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಅನುದಾನ ನೀಡಲಾಗಿದೆ. ಅದರ ಮುಖೇನ ಈ ಭಾಗದಲ್ಲಿ ರಸ್ತೆ, ಕುಡಿಯುವ ನೀರು, ಕೃಷಿ ಮತ್ತು ಉದ್ಯೋಗ ಸೃಷ್ಟಿಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಉಪನ್ಯಾಸ ನೀಡಿದ ಡಾ|ಸುಭಾಷಚಂದ್ರ ದೊಡ್ಡಮನಿ, ವಿಮೋಚನೆಗಾಗಿ ಈ ಭಾಗದ ಅನೇಕ ಹೋರಾಟಗಾರರು ಬಲಿದಾನ ಮಾಡಿದ್ದಾರೆ. ಆನಂತರ ಸರ್ದಾರ ಪಟೇಲ್‌ರ ನೇತೃತ್ವದಲ್ಲಿ ನಿಜಾಮರು ಅಖಂಡ ಭಾರತದಲ್ಲಿ ಹೈದ್ರಾಬಾದ್‌ ಕರ್ನಾಟಕವನ್ನು ವಿಲೀನಗೊಳಿಸಿದರು. ಈ ಇತಿಹಾಸವನ್ನು, ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಪಠ್ಯದಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು.

ರೇಶ್ಮಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಾರದ ರೇಶ್ಮಿ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಲವಾರಕರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ವಿಮೋಚನಾ ಚಿಂತನ-ಮಂಥನ ಕಾರ್ಯಕ್ರಮಗಳನ್ನು ಶಾಲೆ-ಕಾಲೇಜುಗಳಲ್ಲಿ ಮಾಡಲು ಸಹಕಾರ ನೀಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿದರು. ಒಕ್ಕೂಟದ ಗೌರವಾಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಒಕ್ಕೂಟದ ಕಾರ್ಯಾಧ್ಯಕ್ಷ ಸಚಿನ್‌ ಫರಹತಾಬಾದ್‌, ಜಗನ್ನಾಥ ಪಟ್ಟಣಶೆಟ್ಟಿ, ಡಾ|ವೇದಮೂರ್ತಿ, ಮಲ್ಲಿಕಾರ್ಜುನ ಕಿಳ್ಳಿ, ಗೋಪಾಲ ನಾಟೀಕಾರ, ಆನಂದ ಕಪನೂರು, ಸಂತೋಷ ಚೌಧರಿ ಹಾಗೂ ಯುವಕರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next