ಕಲಬುರಗಿ: ಕಲ್ಯಾಣ ಕರ್ನಾಟಕ ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಇದೇ ಫೆ. 24ರಿಂದ ಮೂರು ದಿನಗಳ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ-2023 ದ ಲೋಗೋ ಹಾಗೂ ವೆಬ್ ಸೈಟ್ ಬಿಡುಗಡೆಗೊಳಿಸಲಾಯಿತು.
ಮಂಡಳಿಯ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಲೋಗೋ ಹಾಗೂ ವೆಬ್ ಸೈಟ್ ಬಿಡುಗಡೆಗೊಳಿಸಿದರು.
ಮೂರು ದಿನಗಳ ಕಾಲ ನಡೆಯುವ ಉತ್ಸವ ಉದ್ಘಾಟನೆ ಇಲ್ಲವೇ ಸಮಾರೋಪಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವರು. ಎಲ್ಲ ವಿಧದ ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದೇಶದ ಖ್ಯಾತ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಉತ್ಸವ ಮೂರು ವೇದಿಕೆಗಳಲ್ಲಿ ನಡೆಯುವುದರಿಂದ ಎಲ್ಲ ಈ ಭಾಗದ ಕಲಾವಿದರಿಗೆ ಅವಕಾಶ ಸಿಗಲಿದೆ ಎಂದು ದತ್ತಾತ್ರೇಯ ಪಾಟೀಲ್ ರೇವೂರ ತಿಳಿಸಿದರು.
ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಢಿ, ಪುಸ್ತಕ ಪ್ರದರ್ಶನ, ಗಾಳಿಪುಟ, ಮಕ್ಕಳ ಉತ್ಸವ, ಕಲಾ ಶಿಬಿರ, ಮಹಿಳಾ ಸ್ವ ಸಹಾಯ, ಫಲಪುಷ್ಪ ಪ್ರದರ್ಶನ, ಸಿರಿ ಧಾನ್ಯಗಳ ಮೇಳ, ಹಾಟ್ ಏರ್ ಬಲೂನ್ ಇತ್ಯಾದಿಗಳ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ ಕುಲಕರ್ಣಿ, ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಕೆ..ಕೆ.ಆರ್.ಟಿ.ಸಿ. ಎಂ.ಡಿ. ಎಮ.ರಾಚಪ್ಪ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಮಂಡಳಿ ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ, ಜಂಟಿ ನಿರ್ದೇಶಕಿ ಪ್ರವೀಣ ಪ್ರಿಯಾ ಸೇರಿದಂತೆ ಉತ್ಸವದ ವಿವಿಧ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಇದ್ದರು.