Advertisement

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

07:46 AM Aug 22, 2021 | Team Udayavani |

ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಕಲ್ಯಾಣ್ ಸಿಂಗ್ ಅವರಿಗೆ ಸದ್ಯ 89 ವರ್ಷ ವಯಸ್ಸಾಗಿತ್ತು.

Advertisement

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರನ್ನು ಜುಲೈ 4ರಂದು ಸಿಂಗ್ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.

ಇವರು 1991, ಜೂನ್‌ನಿಂದ 1992 ಡಿಸೆಂಬರ್​ ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next