Advertisement

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ

05:17 PM Sep 17, 2020 | sudhir |

ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿ – ಬೀದರ್ ಜಿಲ್ಲೆಗೆ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10ಏತ ನೀರಾವರಿ ಯೋಜನೆಗೆ ಅನುಮತಿ ನೀಡಲಾಗಿದೆಯಲ್ಲದೇ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದರು.

ಕಲಬುರಗಿಯಲ್ಲಿ ರೈಲ್ವೆ ಕಚೇರಿ ಸ್ಥಾಪನೆಗೆ ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಲಾಗುವುದು. ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1200 ಮೆಗಾ ವ್ಯಾಟ್ ಸಾಮರ್ಥ್ಯ ದ 10.000 ಕೋಟಿ ರೂ ವೆಚ್ಚದಲ್ಲಿ ಜಲ ವಿದ್ಯುತ್ ಯೋಜನೆಯು ಪರಿಶೀಲನೆ ಹಂತದಲ್ಲಿದ್ದು, ನೆರೆ ರಾಜ್ಯದ ಜತೆ ಮಾತುಕತೆ ನಂತರ ಸೂಕ್ತ ಕ್ರಮ ವಹಿಸಲಾಗುವುದು ಎಂದ ಅವರು ಬಹು ಮುಖ್ಯವಾಗಿ ಮುಂಬರುವ ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣದಲ್ಲಿ ಅಭಿವೃದ್ಧಿ ಪ್ರಾಧಿಕಾರದಿಂದ ಹಿರಿಯರ ಆಶಯದಂತೆ ಎಲ್ಲ ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ತಿಳಿಸಿದರು.

ಇದನ್ನೂ ಓದಿ :ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

ಅದೇ ರೀತಿ ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದ 1510 ಎಕರೆ ಪ್ರದೇಶದಲ್ಲಿ ಭಾರತ ಸರ್ಕಾರದ ಬಲ್ಕ ಡ್ರಗ್ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಯ ಅಭಿವೃದ್ಧಿ ವೆಚ್ಚವು 1446 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1000 ಕೋ ರೂ ಸಿಗುವ ನಿರೀಕ್ಷೆವಿದೆ ಎಂದರು.

Advertisement

ಕೊಪ್ಪಳ ಜಿಲ್ಲೆಯಲ್ಲಿ ಗೊಂಬೆ ತಯಾರಿಕಾ ಘಟಕ ಮುಂದಿನ ತಿಂಗಳು ಆರಂಭವಾಗಲಿದೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಲು ಅನುಕೂಲವಾಗಲು ಸುಸಜ್ಜಿತ ವಸತಿ ನಿಲಯ ಕಲ್ಪಿಸಲು ಈಗಾಗಲೇ ಸ್ಥಳ ಗುರುತಿಸಲಾಗಿದೆ. ವರ್ಷದಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು.

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಸಂಸದ ಡಾ.ಉಮೇಶ ಜಾಧವ, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಶಾಸಕರಾದ ಬಸವರಾಜ ಮತ್ತಿಮೂಡ ಡಾ.ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ. ಪಾಟೀಲ ಹಾಗೂ ಇತರ ಪ್ರತಿನಿಧಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next