Advertisement

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂಪಾಯಿ ಅನುದಾನ ಬಿಡುಗಡೆ

09:10 PM Feb 05, 2022 | Team Udayavani |

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

Advertisement

ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ .

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಭರವಸೆ ನೀಡಿದ್ದರು.

ಆ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ ಸರ್ಕಾರ ಅದೇಶಿಸಿದೆ.

ಇದನ್ನೂ ಓದಿ : ಅಕ್ರಮ ಸ್ಪಾಗಳ ಮೇಲೆ ಸಿಸಿಬಿ ದಾಳಿ : ಇಬ್ಬರ ಬಂಧನ, 13 ಮಹಿಳೆಯರ ರಕ್ಷಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next