Advertisement

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

09:42 AM Sep 17, 2024 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

Advertisement

ಇದಕ್ಕೂ ಮೊದಲು ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಮಾಲಾರ್ಪಣೆ ಮಾಡಿದರು.

ಸಂಪುಟ ಸಭೆ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಆಗಮಿಸಿದ್ದು, ಸಿಎಂ ಅವರಿಗೆ ಸಾಥ್ ನೀಡಿದರು.

ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

Advertisement

ಕೊಪ್ಪಳ ಬೀದರ್ ನಲ್ಲೂ ಆಚರಣೆ:
ಕಲ್ಯಾಣ ಕರ್ನಾಟಕ 77ನೇ ಉತ್ಸವ ಆಚರಣೆ ಅಂಗವಾಗಿ ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಸಚಿವ ಶಿವರಾಜ ತಂಗಡಗಿ ಅವರು ಪರೇಡ್ ವೀಕ್ಷಣೆ ಮಾಡಿದರು.

ಬೀದರ್:
ಉತ್ಸವ ನಿಮಿತ್ತ ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನೆರವೇರಿಸಿದರು. ಉತ್ಸವ ‌ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಯಿಂದ ಕ್ರೀಡಾಂಗಣದವರೆಗೆ ಸರದಾರ್ ವಲ್ಲಭಭಾಯಿ ಪಟೇಲ್ ಭಾವಚಿತ್ರದ. ಭವ್ಯ ಮೆರವಣಿಗೆ. ಸಂಸದ ಭಗವಂತ ಖೂಬಾ, ಶಾಸಕ ಡಾ. ಶೈಲೇಂದ್ರ ‌ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ್ ಬದೋಲೆ, ಎಸ್.ಪಿ ಪ್ರದೀಪ ಗುಂಟಿ ಮತ್ತು ಹೆಚ್ಚುವರಿ ಡಿಸಿ ಶಿವಕುಮಾರ ಶೀಲವಂತ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.