Advertisement

ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

09:41 AM Sep 17, 2021 | Team Udayavani |

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಇಂದು ಕಲಬುರಗಿ ನಗರದಲ್ಲಿ ಧ್ವಜಾರೋಹಣ ನೆರವೇರಿಸಿದರು.

Advertisement

ಇಲ್ಲಿನ ಪೊಲೀಸ್ ಮೈದಾನದಲ್ಲಿ ನಡೆಯುತ್ತಿರುವ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡಿದರು.

ಇದಕ್ಕೂ ಮುನ್ನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೈದರಾಬಾದ್ ಕರ್ನಾಟಕ (ಇಂದಿನ ಕಲ್ಯಾಣ ಕರ್ನಾಟಕ) ವಿಮೋಚನಾದ ರೂವಾರಿಗಳಾದ ದೇಶ ಮೊದಲ ಉಪ ಪ್ರಧಾನಿ, ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನವ ಕಲ್ಯಾಣ ಕರ್ನಾಟಕ, ನವ ಕರ್ನಾಟಕ ನಿರ್ಮಾಣಕ್ಕೆ ಆದ್ಯತೆಯಾಗಿದೆ. ಪಟೇಲರ ಕೊಡುಗೆ ದೇಶಕ್ಕೆ ಅಪಾರವಾದದ್ದು, ಅವರು ಹಾಕಿರುವ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ:ಶ್ರೀಸಾಮಾನ್ಯರಿಗೆ ಆಪತ್ಭಾಂಧವ ದೇಶ, ವಿರೋಧಿಗಳಿಗೆ ಸಿಂಹಸ್ವಪ್ನ :

Advertisement

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರದೇಶ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್, ಸಂಸದ ಡಾ.ಉಮೇಶ ಜಾಧವ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ್, ಶಾಸಕರಾದ ಎಂ.ವೈ ಪಾಟೀಲ, ಬಸವರಾಜ ಮತ್ತಿಮಡು, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಹಾಗೂ ಎಂ.ಎಲ್.ಸಿ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next