Advertisement
ಹಲವಾರು ವರ್ಷಗಳಿಂದ ಸಂಚಾರ ದಟ್ಟಣೆ, ಅಪಘಾತಗಳ ಕೇಂದ್ರವಾಗಿದ್ದ ಈ ಜಂಕ್ಷನ್‌ನಲ್ಲಿ ಓವರ್‌ಪಾಸ್ ನಿರ್ಮಿಸುವಂತೆ ಸಾರ್ವಜನಿಕ ವಲಯದಲ್ಲಿ ಬೇಡಿಕೆ ಹೆಚ್ಚಿತ್ತು. ಅನಂತರ ಇಲ್ಲಿ ಓವರ್‌ಪಾಸ್ ನಿರ್ಮಾಣ ಕುರಿತ ಪ್ರಸ್ತಾವನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) 27.4 ಕೋ. ರೂ. ವೆಚ್ಚದ ಅನುಮೋದನೆ ನೀಡಿದ್ದು, ಟೆಂಡರ್‌ಪಕ್ರಿಯೆ ಪೂರ್ಣಗೊಂಡು ಜ.12ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೂಮಿ ಪೂಜೆ ನೆರವೇರಿಸಿದ್ದರು.
Related Articles
ಕಾಮಗಾರಿ ಹಿನ್ನೆಲೆಯಲ್ಲಿ ಟ್ರಾಫಿಕ್ ದಟ್ಟಣೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ರೂಪಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ಬಸ್ ಸಹಿತ ಎಲ್ಲ ವಾಹನಗಳು ಸಂತೆಕಟ್ಟೆಯಿಂದ ಸರ್ವಿಸ್ ರಸ್ತೆಯಲ್ಲಿ ಉಡುಪಿಗೆ ಹೋಗಲು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳೀಯರಿಗೆ ಮತ್ತು ಕಲ್ಯಾಣಪುರ, ಮಲ್ಪೆ, ಕೊಡವೂರು, ಲಕ್ಷ್ಮೀನಗರ, ಬೇಂಗ್ರೆ, ಹೂಡೆ, ಕೆಮ್ಮಣ್ಣು, ನೇಜಾರ್ ಭಾಗಕ್ಕೆ ಹೋಗುವವರಿಗೆ ಅನುಕೂಲ ಆಗುವಂತೆ ಸಂತೆಕಟ್ಟೆ ಸೇತುವೆಯಿಂದ ಸ್ವಲ್ಪ ಮುಂದಕ್ಕೆ(ಕುಂದಾಪುರದಿಂದ ಉಡುಪಿಗೆ ಬರುವಾಗ) ಡಿವೈಡರ್ ಒಡೆದು ತಾತ್ಕಾಲಿಕ ಯು-ಟರ್ನ್ ವ್ಯವಸ್ಥೆ ಕಲ್ಪಿಸಿ, ಸೂಚನ ಫಲಕ ಅಳವಡಿಸಲಾಗಿದೆ. ಹಾಗೆಯೇ ಸರ್ವಿಸ್ ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಸ್ಥಳೀಯರಿಗೆ ಅನುಕೂಲವಾಗುವಂತೆ ಪೂರ್ಣ ಪ್ರಮಾಣದಲ್ಲಿ ಸರ್ವೀಸ್ ರಸ್ತೆ ಬಳಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಉಡುಪಿಯಿಂದ ಕುಂದಾಪುರದ ಕಡೆಗೆ ಹೋಗುವ ಎಲ್ಲ ವಾಹನಗಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸಲಿದೆ. ಕುಂದಾಪುರದಿಂದ ಉಡುಪಿಗೆ ಬರುವವರು ಸದ್ಯಕ್ಕೆ ಕೊಳಲಗಿರಿ, ಶೀಂಬ್ರಾ, ಮಣಿಪಾಲ ಸುತ್ತುವರಿದು ಬರಬೇಕಾಗಿಲ್ಲ.
Advertisement