Advertisement

ಡಿಸೆಂಬರ್ 31ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ: ನಿಯಮ ಉಲ್ಲಂಘಿಸಿದರೆ ಕ್ರಮ

09:48 PM Dec 28, 2020 | sudhir |

ಬೆಂಗಳೂರು : ರಾಜ್ಯದಲ್ಲಿ ರೂಪಾಂತರಗೊಂಡ ವೈರಸ್ ನ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 31ರಿಂದ ಜನವರಿ 1ರ ಬೆಳಿಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ತಡೆ ಹಾಕಲಾಗಿದೆ. ಹೊಸ ವರ್ಷಾಚರಣೆಗೆ ಕೆಲವೊಂದು ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದ್ದು ಬೆಂಗಳೂರು ನಗರ ವಾಸಿಗಳು ಪಾಲಿಸಬೇಕಾಗಿದೆ ತಪ್ಪಿದಲ್ಲಿ ಕ್ರಮ ಜರಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ಮಾರ್ಗಸೂಚಿಯಲ್ಲೇನಿದೆ :
1. ಐದಕ್ಕಿಂತ ಹೆಚ್ಚು ಮಂದಿ ಸೇರಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ.

2.ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ.

3.ಪಬ್, ಬಾರ್, ಹೋಟೆಲ್ ಗಳು ಸಂಜೆ ೬ ರ ಬಳಿಕ ಬಂದ್ ಆಗಲಿವೆ ಅಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇಲ್ಲ.

Advertisement

4.ಮನೆಗಳಲ್ಲಿ ಸಂಭ್ರಮಾಚರಣೆಗೆ ಅವಕಾಶ ಇರಲಿದೆ ಆದರೆ ಮ್ಯೂಸಿಕ್, ಡಿಜೆ ಗಳಿಗೆ ಅವಕಾಶ ಇಲ್ಲ.

ನಗರದಾದ್ಯಂತ ಪೊಲೀಸ್ ಸರ್ಪಗಾವಲಿದ್ದು ನಿಯಮ ಉಲ್ಲಘಿಸಿದಲ್ಲಿ ಕಠಿಣ ಕ್ರಮ ಜರಗಿಸಲಾಗುವುದು.

ಬೆಂಗಳೂರಿನಲ್ಲಿ ನಾಕಾಬಂದಿ ಇರಲಿದ್ದು, ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಕಮಲ್​ಪಂತ್​ ತಿಳಿಸಿದರು.

ನಗರದ ಎಂಜಿ ರಸ್ತೆ,ಚರ್ಚ್​ಸ್ಟ್ರೀಟ್, ಕಮರ್ಷಿಯಲ್​ ಸ್ಟ್ರೀಟ್​, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್​ ಮಾಡಲಾಗುವುದು, ಅಲ್ಲದೆ ಈ ಏರಿಯಾಗಳಲ್ಲಿ ಕೂಪನ್​ ಬುಕ್ಕಿಂಗ್ ಕಡ್ಡಾಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next