Advertisement
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವೈವಿಧ್ಯದ ಕಾರ್ಯಕ್ರಮಗಳ ಮೂಲಕ ಸಂಘಟನೆಗೆ ಒತ್ತು ನೀಡಿರುವ ಬಿಜೆಪಿ, ಮಂಗಳವಾರ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಆಚರಿಸಿತು. ಮಂಗಳವಾರ ನಸುಕಿನಲ್ಲಿ ಭಾರತೀಯ ವಾಯುಪಡೆಯು ಉಗ್ರ ಸಂಘಟನೆಯ ಶಿಬಿರದ ಮೇಲೆ ಯಶಸ್ವಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮದಿಂದ ಪಾಲ್ಗೊಂಡಿದ್ದರು.
Related Articles
Advertisement
ಜಯನಗರದಲ್ಲಿ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ ಇತರರು ಪಾಲ್ಗೊಂಡಿದ್ದರು. ವರ್ಣಮಯ ರಂಗೋಲಿ ನಡುವೆ ಜೋತಿ ಬೆಳಗಿಸಲಾಯಿತು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸಂಜಯನಗರ ಮುಖ್ಯರಸ್ತೆಯಲ್ಲಿರುವ ರಾಧಾಕೃಷ್ಣ ದೇವಸ್ಥಾನದ ಬಳಿ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಿದರು. ಇದರೊಂದಿಗೆ ಬೆಂಗಳೂರಿನ 4,000ಕ್ಕೂ ಹೆಚ್ಚು ಬೂತ್‌ಗಳಲ್ಲಿ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.