Advertisement

ಚರಂಡಿ ಸ್ವಚ್ಛತೆಗೆ ಜನರ ಆಗ್ರಹ

10:26 AM Jul 11, 2019 | Naveen |

ಕಮಲನಗರ: ಪಟ್ಟಣದ ವಾರ್ಡ್‌ ನಂ. 2ರಲ್ಲಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆ ಪಕ್ಕದಲ್ಲಿರುವ ಚರಂಡಿಯಲ್ಲಿ ಕಸ-ಕಡ್ಡಿಯಿಂದ ತುಂಬಿ ಸ್ವಚ್ಛತೆ ಮರಚೀಕೆಯಾಗಿದ್ದರಿಂದ

Advertisement

ಮಳೆ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ.

ಈಗಾಗಲೇ ಮಳೆಗಾಲ ಆರಂಭವಾಗಿದೆ. ಚರಂಡಿಯಲ್ಲಿ ಕಸ, ಕಡ್ಡಿ ತುಂಬಿಕೊಂಡಿದ್ದರಿಂದ ಮಳೆ ನೀರು ಸುಗಮವಾಗಿ ಹರಿಯದೆ ರಸ್ತೆ ತುಂಬೆಲ್ಲ ಹರಿದು ಗಬ್ಬು ನಾರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ವಿಪರೀತವಾಗಿದೆ.

ಪಂಚಾಯತಿ ಅಧಿಕಾರಿ, ಚುನಾಯಿತ ಪ್ರತಿನಿಧಿಗಳ ನಿಷ್ಕಾಳಜಿ ಹಾಗೂ ಬೇಜವಾಬ್ದಾರಿ ವರ್ತನೆಯಿಂದಾಗಿ ಬಡಾವಣೆಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಮಳೆಗಾಲದಲ್ಲಿ ಬಡಾವಣೆ ಜನರ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ದವಸ ಧಾನ್ಯ, ಯಂತ್ರೋಪಕರಣಗಳು ಹಾಳಾಗಿವೆ. ಈ ವರ್ಷವೂ ಮಳೆಗಾಲ ಆರಂಭವಾಗಿದೆ. ಮಳೆ ನೀರು ಸುಗಮವಾಗಿ ಹರಿದು ಹೋಗಲು ದಾರಿ ಇಲ್ಲ. ಹಾಗಾಗಿ ಮಳೆ ಬಂದರೆ ಸಾಕು ಜನರು ರಾತ್ರಿ ಇಡೀ ಭಯದಲ್ಲಿ ಜಾಗರಣೆ ಮಾಡುವಂತಹ ಪರಿಸ್ಥಿತಿ ಎದುರಾಗುತ್ತದೆ.

Advertisement

ಈ ಕುರಿತು ಸಾಕಷ್ಟು ಸಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಬಡಾವಣೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಎಚ್ಚತ್ತು ಬಡಾವಣೆಯಲ್ಲಿ ಸ್ವಚ್ಛತೆ ಕಾಪಾಡಲು ಮುಂದಾಗಬೇಕು. ಬಡಾವಣೆಯಲ್ಲಿ ಮಳೆ ನೀರು ಮನೆಗಳಿಗೆ ನಗ್ಗುವ ಮುನ್ನವೇ ಸ್ಥಳಕ್ಕೆ ಭೇಟಿ ನೀಡಿ ಮುಂದಾಗುವ ಅನಾಹುತ ತಡೆಯಬೇಕು. ಇನ್ನೂ ವಿಳಂಬವಾದರೆ ಪ್ರಜ್ಞಾವಂತ ನಾಗರಿಕರು ಸೇರಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.

ರೈಲ್ವೆ ನಿಲ್ದಾಣದ ಬಡಾವಣೆಯಲ್ಲಿ ಮಳೆ ಬಿದ್ದರೆ ಸಾಕು ನೀರು ಸಂಗ್ರಹವಾಗಿ ಮನೆಯಿಂದ ಹೊರಗೆ ಹೋಗಲು ಬಾರದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಬಡಾವಣೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಮಸ್ಯೆಗೆ ಕಾರಣವಾಗಿದೆ.
ಬಾ.ನಾ. ಸೊಲ್ಲಾಪುರೆ,
ಹಿರಿಯ ಸಾಹಿತಿ

Advertisement

Udayavani is now on Telegram. Click here to join our channel and stay updated with the latest news.

Next