ಸಿದ್ದಾಪುರ: ಇಲ್ಲಿನ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಬುಧವಾರ ಶ್ರೀ ಮನ್ಮಹಾರಥೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು.
Advertisement
ಕ್ಷೇತ್ರದ ಕೂಡುವಳಿಗೆಯ 7 ಗ್ರಾಮದ ಗ್ರಾಮಸ್ತರು ಮತ್ತು ರಾಜ್ಯದ ನಾನಾ ಮೂಲೆಗಳಿಂದ ಸಾವಿರಾರೂ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದರು. ಭಕ್ತರನ್ನು ದೇಗುಲದ ಅನುವಂಶಿಕ ಆಡಳಿತ ಧರ್ಮದರ್ಶಿ ಶೆಟ್ಟಿಪಾಲು ಸಚ್ಚಿದಾನಂದ ಚಾತ್ರ, ಸಹ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು ಅವರು ಬರಮಾಡಿಕೊಂಡರು.
ಇದನ್ನೂ ಓದಿ: Bhatkal BJP ಟಿಕೆಟ್ ಗೊಂದಲ ನಿವಾರಣೆ; ಪ್ರಚಾರದ ಭರಾಟೆ ಆರಂಭವಾಗಬೇಕಿದೆ