ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಕಂಬಳ ಅಸೋಸಿ ಯೇಶನ್‌ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಶೀಘ್ರ ಮಾನ್ಯತೆ ದೊರೆಯಲಿದೆ.
ಶಾಸಕರ ಭವನದಲ್ಲಿ ಶುಕ್ರವಾರ ನಡೆದ ಸರಕಾರದ ಭರವಸೆ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಮಂಜುನಾಥ ಭಂಡಾರಿ ವಿಷಯ ಪ್ರಸ್ತಾವಿಸಿ, ಕರಾವಳಿ ಸಂಸ್ಕೃತಿಯ ಪ್ರತೀಕ ಹಾಗೂ ಜಾನಪದ ಕ್ರೀಡೆ ಕಂಬಳಕ್ಕೆ ಮಾನ್ಯತೆ ಹಾಗೂ ರಾಜ್ಯ ಸರಕಾರದ ಕ್ರೀಡಾ ಪ್ರಾಧಿಕಾರದಿಂದ ನೋಂದಣಿಗೆ ಒಪ್ಪಿಗೆ ನೀಡುವುದಾಗಿ ಸಂಬಂಧಪಟ್ಟ ಸಚಿವರು ಭರವಸೆ ನೀಡಿದ್ದರು. ಈವರೆಗೆ ಇದು ಈಡೇರಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಜತೆಗೆ ಅಧಿಕಾರಿಗಳ ಧೋರಣೆಯನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಸ್ಪಂದಿಸಿದ ಇಲಾಖೆ ಅಧಿಕಾರಿಗಳು ಅನುಮೋದನೆ ನೀಡುವುದಾಗಿ ಹೇಳಿದರು. ಈ ಹಿಂದೆ ಅಧಿವೇಶನದಲ್ಲಿ ತಾವು ನಿಯಮ 330ರಡಿ ವಿಷಯ ಪ್ರಸ್ತಾವಿಸಿ ರಾಜ್ಯ ಕಂಬಳ ಅಸೋಸಿಯೇಶನ್‌ಗೆಮಾನ್ಯತೆ ಮತ್ತು ನೋಂದಣಿಗೆ ಅನುಮೋದನೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಚಿವರು, ಅನುಮೋದನೆ ನೀಡುವುದಾಗಿಯೂ ಹೇಳಿದ್ದರು. ಅನಂತರ ಸಭಾಪತಿಗಳ ಅಧ್ಯಕ್ಷತೆಯಲ್ಲಿ ಸಚಿವರ ಹಾಗೂ ಅಂದಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗಿದ್ದ ಡಾ| ಶಾಲಿನಿ ರಜನೀಶ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭೆ ಕರೆದು ಕೂಡಲೇ ಸರಕಾರಕ್ಕೆ ವರದಿ ನೀಡುವಂತೆ ನಿರ್ದೇಶನ ನೀಡಿದ್ದರು.
ಇದಾದ ಮೇಲೆ ದ.ಕ. ಜಿಲ್ಲಾಡಳಿತವು ಕಂಬಳ ಅಸೋಸಿ ಯೇಶನ್‌ಗೆ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ನೀಡುವ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಇದುವರೆಗೆ ಮಾನ್ಯತೆ ದೊರೆತಿಲ್ಲ. ಈ ಬಗ್ಗೆ ಭರವಸೆ ಸಮಿತಿಯಲ್ಲಿ ಮಂಜುನಾಥ ಭಂಡಾರಿ ಅಸಮಾ ಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್, ಕೂಡಲೇ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು.