ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಗಳಿಸಿದೆ. ತುಳುವರ ಕೃಷಿಬದುಕಿನ ಪರಿಶ್ರಮ,
ಸಂಭ್ರಮದ ಪ್ರತೀಕವಾದ ಕಂಬಳವನ್ನು ಉಳಿಸಿ ಬೆಳೆಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
Advertisement
ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ’ ಗ್ರಾಮದಲ್ಲಿ ನಡೆದ 17ನೇ ವರ್ಷದ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಬಯಲು ಕಂಬಳದಲ್ಲಿ “ಅಬ್ಬಕ್ಕ’ ಪ್ರತಿಮೆಯನ್ನು ಲೋಕಾರ್ಪಣೆ ಗೊಳಿಸಿ, ಕಂಬಳ ವೀಕ್ಷಿಸಿ ಅವರು ಮಾತನಾಡಿದರು.
ಮೂಡುಬಿದಿರೆ ತಾಲೂಕಿನ ಮೂಲ ಸೌಕರ್ಯಗಳಿಗಾಗಿ 100 ಕೋ. ರೂ. ಒದಗಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸಿಎಂ ಅವರಲ್ಲಿ ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಮುಖ್ಯ ಸಚೇತಕ ಸುನಿಲ್ ಕುಮಾರ್, ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಪುತ್ತೂರು ವಿವೇಕಾನಂದ ವಿದ್ಯಾಲಯಗಳ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ರಾಜೇಶ್ ನಾೖಕ್, ಹರೀಶ್ ಪೂಂಜ, ವಾರ್ತಾಧಿಕಾರಿ ಖಾದರ್ ಷಾ, ಜಿ.ಪಂ. ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ತಹಶೀಲ್ದಾರ್ ಅನಿತಾಲಕ್ಷ್ಮೀ, ಕಂಬಳ ಸಮಿತಿಯ ಗೌರವ ಸಲಹೆಗಾರ, ಆಳ್ವಾಸ್ ಪ್ರವರ್ತಕ ಡಾ| ಎಂ. ಮೋಹನ ಆಳ್ವ, ಅದಾನಿ ಸಂಸ್ಥೆಯ ನಿರ್ವಾಹಕ ನಿರ್ದೇಶಕ ಮತ್ತು ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ, ಮಾಜಿ ಸಚಿವ ನಾಗರಾಜ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
Related Articles
Advertisement
ಸಮ್ಮಾನಕಂಬಳ ಕ್ಷೇತ್ರದ ಸಾಧಕ, ಪ್ರಧಾನದ ತೀರ್ಪುಗಾರ ಕೆ. ಗುಣಪಾಲ ಕಡಂಬ ಅವರನ್ನು ಸಮ್ಮಾನಿಸಲಾಯಿತು.