Advertisement

ಕೃಷಿ ಹೊಂಡ-ಬದು ನಿರ್ಮಾಣ ಕಾಮಗಾರಿ ವೀಕ್ಷಣೆ

05:40 PM Jun 03, 2020 | Naveen |

ಕಂಪ್ಲಿ: ಎರಡು ತಿಂಗಳಿನಿಂದ ಜಾರಿಯಾದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ತೊಂದರೆಯಾಗದಿರಲೆಂದು ದೇವ ಸಮುದ್ರ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ 17 ಸಾವಿರ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ದೇವಸಮುದ್ರ ಗ್ರಾಪಂ ಪಿಡಿಒ ಸಾವಿತ್ರಿ ಗೌರೋಜಿ ತಿಳಿಸಿದರು.

Advertisement

ಅವರು ತಾಲೂಕಿನ ದೇವಸಮುದ್ರ ಗ್ರಾಪಂ ವ್ಯಾಪ್ತಿಯ ದೇವಸಮುದ್ರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯ ತಾಂತ್ರಿಕ ಸಹಾಯದೊಂದಿಗೆ ನಡೆದಿರುವ ಕೃಷಿ ಹೊಂಡ ಹಾಗೂ ಬದು ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು. ಸಣ್ಣ ಮತ್ತು ಅತೀ ಸಣ್ಣ ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡ ಮತ್ತು ಬದುಗಳ ನಿರ್ಮಾಣವನ್ನು ಮನರೇಗಾ ಯೋಜನೆಯಲ್ಲಿ ನಿರ್ಮಿಸಿಕೊಳ್ಳಬಹುದಾಗಿದ್ದು, ರೈತರು ಗ್ರಾಪಂ ಅಧಿ ಕಾರಿಗಳನ್ನು ಹಾಗೂ ತಾಲೂಕಿನ ಕೃಷಿ ಅಧಿ ಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಕೃಷಿ ಹೊಂಡಗಳು ನಿರ್ಮಾಣಗೊಂಡಿದ್ದು, ಇನ್ನು ಮೂರು ನಿರ್ಮಾಣ ಹಂತದಲ್ಲಿವೆ. ನಾಲ್ಕು ಬದು ನಿರ್ಮಾಣ ಕಾಮಗಾರಿಗಳಲ್ಲಿ ಮೂರು ಪ್ರಗತಿಯಲ್ಲಿವೆ. 10 ಕುರಿ ಶೆಡ್‌ ಮತ್ತು ದನದ ಶೆಡ್‌ಗಳು ನಿರ್ಮಾಣಗೊಂಡಿವೆ. ಪ್ರಸಕ್ತ ಈ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗಾಗಿ 17 ಸಾವಿರ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ವಿವರಿಸಿದರು.

ಗ್ರಾಪಂ ಅಧ್ಯಕ್ಷ ಕೊರವರ ಶಂಕ್ರಪ್ಪ ಮಾತನಾಡಿ, ರೈತರು ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳುವುದರಿಂದ ಕೊಳವೆ ಬಾವಿ ಹಾಗೂ ಮಳೆನೀರನ್ನು ಸಂಗ್ರಹಿಸಿ ಉತ್ತಮ ಬೆಳೆಗಳನ್ನು ಬೆಳೆಯಬಹುದಾಗಿದ್ದು, ಬದುಗಳನ್ನು ನಿರ್ಮಾಣ ಮಾಡಿಕೊಳ್ಳುವುದರಿಂದ ಭೂಮಿ ಫಲವತ್ತತೆಯನ್ನು ಕಾಪಾಡಿಕೊಳ್ಳಬಹುದಾಗಿದ್ದು, ರೈತರು ಈ ಬಗ್ಗೆ ಗಮನಹರಿಸಬೇಕು ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಣಾಪುರ ರುದ್ರಪ್ಪ, ಸದಸ್ಯರು, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next