Advertisement

ನರೇಗಾದಿಂದ ಕೂಲಿ ಕಾರ್ಮಿಕರಿಗೆ ಉದ್ಯೋಗ

06:40 PM May 21, 2020 | Naveen |

ಕಂಪ್ಲಿ: ಕೋವಿಡ್ ಲಾಕ್‌ಡೌನ್‌ ಜಾರಿಗೊಳಿಸಿದ ಪರಿಣಾಮವಾಗಿ ಕೆಲಸವಿಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದ ಕೂಲಿ ಕಾರ್ಮಿಕರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನಿತ್ಯ ಸಂಜೀವಿನಿಯಾಗಿದೆ ಎಂದು ಜಿಪಂ ಸದಸ್ಯ ಕೆ.ಶ್ರೀನಿವಾಸರಾವ ತಿಳಿಸಿದರು.

Advertisement

ಅವರು ತಾಲೂಕಿನ ನಂ.10 ಮುದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೈಗೊಂಡಿರುವ ವಿಜಯನಗರ ಉಪ ಕಾಲುವೆ ಹೂಳು ತೆರವು ಕಾಮಗಾರಿ ವೀಕ್ಷಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 844 ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ ಎಂದರು.

ಪಿಡಿಒ ಬೀರಲಿಂಗ ಮಾತನಾಡಿ ವಿಜಯನಗರ ಉಪ ಕಾಲುವೆಗಳ ಹೂಳು ತೆರವು, ರೈತರ ಹೊಲದಲ್ಲಿ ನೀರಿನ ತೊಟ್ಟಿ ನಿರ್ಮಾಣ, ಬದು ನಿರ್ಮಾಣ, ವೈಯಕ್ತಿಕ ಕೊಳವೆ ಬಾವಿ ಬಳಿ ಮಳೆ ನೀರು ಮರುಪೂರಣ ಘಟಕ ನಿರ್ಮಾಣ ಕಾಮಗಾರಿಗಳು ಭರದಿಂದ ಸಾಗಿವೆ ಎಂದು ತಿಳಿಸಿದರು.

ಕಾಮಗಾರಿಗಳು ನಡೆಯುತ್ತಿರುವ ಸ್ಥಳದಲ್ಲಿ ಕಾರ್ಮಿಕರು ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿರುವುದರ ಜೊತೆಗೆ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ನರೇಗಾದಡಿ ಜಾನುವಾರು, ಕುರಿ ಶೆಡ್‌ ನಿರ್ಮಿಸಿಕೊಳ್ಳಲು ಅವಕಾಶವಿದ್ದು ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಗ್ರಾಪಂ ಉಪಾಧ್ಯಕ್ಷ ವೈ.ಉಮೇಶ್‌, ಸದಸ್ಯರಾದ ಆನೆಗುಂದಿ ತಾಯಣ್ಣ, ವೈ. ಲೋಕರಾಜ್‌, ಕಾರ್ಯದರ್ಶಿ ಗಿರೆಡ್ಡಿ ವೀರಭದ್ರಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next