Advertisement

ಅಕಾಲಿಕ ಗಾಳಿ-ಮಳೆಗೆ ಅಪಾರ ಭತ್ತ ನಷ್ಟ

06:05 PM Apr 11, 2020 | Team Udayavani |

ಕಂಪ್ಲಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಏ.7 ರಂದು ಬೀಸಿದ ಬಿರುಗಾಳಿ ಹಾಗೂ ಅಕಾಲಿಕ ಮಳೆಗೆ ನೆಲಕ್ಕೆ ಬಿದ್ದು, ಅಪಾರ ನಷ್ಟ ಸಂಭವಿಸಿದ್ದು, ಸರ್ಕಾರ ಕೂಡಲೇ ಸಮೀಕ್ಷೆ ಕೈಗೊಂಡು ಸೂಕ್ತ ಪರಿಹಾರ ನೀಡಬೇಕೆಂದು ಶಾಸಕ ಜೆ.ಎನ್‌. ಗಣೇಶ ಸರ್ಕಾರಕ್ಕೆ ಮನವಿ ಮಾಡಿದರು. ಅವರು ಪಟ್ಟಣ ವ್ಯಾಪ್ತಿಯ ಹಾಗೂ ತಾಲೂಕಿನ ವಿವಿಧ ಗ್ರಾಮಗಳಾದ ಸಣಾಪುರ, ಬೆಳಗೋಡುಹಾಳು, ರಾಮಸಾಗರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಗಾಳಿ ಹಾಗೂ ಅಕಾಲಿಕ ಮಳೆಗೆ ಹಾನಿಯಾದ ಭತ್ತದ ಗದ್ದೆಗಳಿಗೆ ಭೇಟಿ ನೀಡಿ ಸಂಪೂರ್ಣವಾಗಿ ನೆಲಕ್ಕೆ ಬಿದ್ದಿರುವ ಭತ್ತದ ಗದ್ದೆಗಳನ್ನು ವೀಕ್ಷಿಸಿ ರೈತರ ಪರಿಸ್ಥಿತಿ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು.

Advertisement

ಕಂಪ್ಲಿ ತಾಲೂಕಿನ ರಾಮಸಾಗರದಿಂದ ಹಿಡಿದು ಎಮ್ಮಿಗನೂರು ಗ್ರಾಪಂ ವ್ಯಾಪ್ತಿವರೆಗೂ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಹಿಂಗಾರು ಹಂಗಾಮಿನಲ್ಲಿ ಭತ್ತ ಬೆಳೆದಿದ್ದರು, ಈಗಾಗಲೇ ಕೆಲವು ಭಾಗದಲ್ಲಿ ಕಟಾವಿಗೆ ಬಂದಿದ್ದರೆ, ಇನ್ನು ಕೆಲವೆಡೆ ಕಾಳು ಕಟ್ಟುವ ಹಂತದಲ್ಲಿದ್ದು, ಅಕಾಲಿಕ ಮಳೆ ಮತ್ತು ಗಾಳಿಗೆ ಭತ್ತ ಬಹುತೇಕ ನೆಲಕಚ್ಚಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದು, ಕೂಡಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಸಮಗ್ರವಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ನೀಡುವಲ್ಲಿ ಗಮನ ಹರಿಸಬೇಕು ಎಂದರು.

ಭತ್ತದ ಜೊತೆಗೆ ತಾಲೂಕಿನ ತೋಟಗಾರಿಕೆ ಬೆಳೆಗಳಾದ ಬಾಳೆ, ಮೆಣಸಿನಕಾಯಿ, ಅಂಜೂರ, ದಾಳಿಂಬೆ, ಪಪ್ಪಾಯಿ ಸೇರಿದಂತೆ ವಿವಿಧ ಹಣ್ಣಿನ ಬೆಳೆಗಳು
ಹಾಳಾಗಿದ್ದು ಕೂಡಲೇ ಪರಿಹಾರ ನೀಡುವತ್ತ ಸರ್ಕಾರ ಗಮನ ಹರಿಸಬೇಕೆಂದರು. ರೈತ ಸಂಘದ ಮುಖಂಡರಾದ ಕೊಟ್ಟೂರು ರಮೇಶ್‌, ಮುರಾರಿ,
ವಿಟಿ.ನಾಗರಾಜ, ಮುಖಂಡರಾದ ಕುರಿ ಹುಸೇನಪ್ಪ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next