Advertisement
ಬಳಿಕ ಮಾತನಾಡಿದ ಅವರು, ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳನ್ನು ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಪಟ್ಟಣದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಅನುದಾನಗಳು ಮಂಜೂರಾಗಿದ್ದು, ಇದರಲ್ಲಿ 2.50 ಕೋಟಿ ವೆಚ್ಚದಲ್ಲಿ ಎಪಿಎಂಸಿಯಿಂದ ಕೊಟ್ಟಾಲ್ನ ಕಾಲುವೆವರೆಗಿನ ರಸ್ತೆ, ವಾಲ್ಮೀಕಿ ವೃತ್ತದಿಂದ ಎಲ್ಎಲ್ಸಿ ಕಾಲುವೆವರೆಗೆ 1.50 ಕೋಟಿ ವೆಚ್ಚದ ಕಾಮಗಾರಿಗೆ ಶೀಘ್ರ ಭೂಮಿಪೂಜೆ ಸಲ್ಲಿಸಲಾಗುವುದು. ರಾಮಸಾಗರದಿಂದ-ಕಂಪ್ಲಿ (ಬೈಪಾಸ್ ರಸ್ತೆ)ವರೆಗಿನ ರಸ್ತೆ ಅಭಿವೃದ್ಧಿಗೆ ಶೀಘ್ರ ಟೆಂಡರ್ ಕರೆದು, ಕಾಮಗಾರಿಗೆ ಚಾಲನೆ ನೀಡಲಾಗುವುದು. ಕಂಪ್ಲಿ ಕ್ಷೇತ್ರದಲ್ಲಿರುವ ಎಲ್ಲ ರಸ್ತೆಗಳ ಅಭಿವೃದ್ಧಿ ಜತೆಗೆ ಜನತೆಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಪಟ್ಟಣ ಮಾದರಿ ಪಟ್ಟಣವನ್ನಾಗಿ ರೂಪಿಸುತ್ತೇನೆ. ಮುಂದಿನ ನಾಲ್ಕು ವರ್ಷದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಕ್ಷೇತ್ರದ ಜನರ ಋಣ ತೀರಿಸಲಾಗುವುದು. ಜೂ.28ರಂದು ಕಂಪ್ಲಿಯಲ್ಲಿಯೇ ಮನೆ ಮಾಡುವ ಮೂಲಕ ಇಲ್ಲಿಯೇ ವಾಸವಿದ್ದು, ಪಟ್ಟಣದ 23 ವಾರ್ಡ್‌ಗಳಲ್ಲಿ ಪ್ರತಿದಿನ ಎರಡು ವಾರ್ಡ್‌ಗಳಲ್ಲಿ ಪುರಸಭೆ ಅಧ್ಯಕ್ಷರು, ಮುಖ್ಯಾಧಿಕಾರಿಗಳೊಂದಿಗೆ ಸಂಚಾರ ಮಾಡುವ ಮೂಲಕ ಸಾರ್ವಜನಿಕರ ಕುಂದುಕೊರತೆ ಆಲಿಸಿ ಸೂಕ್ತ ಪರಿಹಾರ ನೀಡಲಾಗುವುದು. ನಿಯಮಿತವಾಗಿ ಕ್ಷೇತ್ರದಲ್ಲಿ ಅಧಿಕಾರಿಗಳ ಸಭೆ ಆಯೋಜಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
Advertisement
ಕಂಪ್ಲಿ ಅಭಿವೃದ್ಧಿಗೆ ಯತ್ನ: ಗಣೇಶ
04:34 PM Jun 15, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.