Advertisement
ಅವರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ಥರ್ಮಲ್ ಸ್ಕ್ರೀನ್, ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಣೆ ಮಾಡಿ ಮಾತನಾಡಿದರು. ಪಟ್ಟಣದ ಬಾಲಕೀಯರ ಸರ್ಕಾರಿ ಪ್ರೌಢಶಾಲೆಯಲ್ಲಿ 491 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ 25 ಹಾಗೂ ಹೆಚ್ಚುವರಿಯಾಗಿ ಎರಡು ಕೊಠಡಿಗಳನ್ನು, ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲೆಯಲ್ಲಿ 537 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇವರಿಗಾಗಿ 27 ಹಾಗೂ ಹೆಚ್ಚುವರಿಯಾಗಿ 2ಮತ್ತು ಕಂಪ್ಲಿ ಫಿರ್ಕಾ ವೀರಶೈವ ಸಂಘದ ಓದ್ಸೋ ಜಡೆಮ್ಮ ಪ್ರೌಢಶಾಲೆಯಲ್ಲಿ 431 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಿಗಾಗಿ 22 ಹಾಗೂ ಹೆಚ್ಚುವರಿಯಾಗಿ 2 ಕೊಠಡಿಗಳನ್ನು, ಎಮ್ಮಿಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ 345 ಹಾಗೂ 11 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇವರಿಗಾಗಿ 17 ಹಾಗೂ 3 ಹೆಚ್ಚುವರಿ ಕೊಠಡಿಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆಗಳನ್ನು ಹಾಕಲಾಗುತ್ತಿದೆ ಎಂದರು.