Advertisement
ಗುರುವಾರ ಕನಕದಾಸರ 533 ನೇ ಜಯಂತ್ಯುತ್ಸವದ ಅಂಗವಾಗಿಸಂದೇಶ ನೀಡಿರುವ ಅವರು,ಜಾತಿ ವ್ಯವಸ್ಥೆ ವಿರುದ್ಧ 15-16ನೇ ಶತಮಾನದಲ್ಲಿ ತಮ್ಮ ಕೀರ್ತನೆಗಳಮೂಲಕ ಸಮರ ಸಾರಿದ ಭಕ್ತಕನದಾಸರು, ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದನೆಲೆಯೇನಾದರೂ ಬಲ್ಲಿರಾ ಎಂಬ ಪ್ರಶ್ನೆಯ ಮೂಲಕ ಜಾತೀಯತೆಯ ಸಂಕುಚಿತ ಭಾವದಿಂದ ಹೊರ ತಂದು ಜಾತ್ಯತೀತತೆಯ ಮಾನವೀಯತೆಯಲ್ಲಿರುವ ಸಮತಾ ಭಾವವನ್ನು ಎಚ್ಚರಿಸಿದ್ದಾರೆ.
Related Articles
Advertisement
ಸ್ಥಾನಿಕ ಆಡಳಿತ ಮಂಡಳಿ ಉಪಕಾರ್ಯಾಧ್ಯಕ್ಷ ವಿ.ಪಿ. ಲಿಂಗನಗೌಡರ ಮಾತನಾಡಿ, ಕೇವಲ ಆಚರಣೆಯಿಂದ ಪ್ರಯೋಜನವಿಲ್ಲ. ಮಹಾಪುರುಷಕನಕದಾಸರ ತತ್ವ, ಆದರ್ಶಗಳನ್ನು ಸಮಾಜ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆಕನಕದಾಸರ ತತ್ವ, ಆದರ್ಶಗಳನ್ನು ತಿಳಿಸಲು ಹೇಳಿದರು.
ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ನಾರಾಯಣ ನಾಯಕ,ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಫ್.ಎನ್ ಗುಡಿಕಟ್ಟಿ, ಉಪಪ್ರಾಚಾರ್ಯ ಪ್ರಲ್ಲಾದ ಪಿ., ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಸುಧಾ ಕೋಟಿಹಾಳ ಹಾಗೂ ಸಿಬ್ಬಂದಿ ಇದ್ದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನಕದಾಸ ಜಯಂತಿ :
ಹಾವೇರಿ: ಜಿಲ್ಲಾಡಳಿತ ಹಾಗೂ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶಶಿಕಲಾ ಹುಡೇದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ, ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಸೇರಿದಂತೆ ವಿವಿಧ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.