Advertisement

ಕನಕದಾಸ ಜಯಂತಿ: “ಕ‌ನಕದಾಸರು ಇಂದಿಗೂ ಪ್ರಸ್ತುತ’

08:36 PM Nov 15, 2019 | mahesh |

ಉಡುಪಿ: ಕನಕದಾಸರ ಕೀರ್ತನೆಗಳು, ತತ್ವಗಳನ್ನು ಅರಿಯವುದರ ಮೂಲಕ ಸಮಾಜದಲ್ಲಿ ಎಲ್ಲ ಸಮುದಾಯಗಳ ಜನರು ಶಾಂತಿ ಸಹಬಾಳ್ವೆಯಿಂದ ಬಾಳಲು ಸಾಧ್ಯವಿದೆ. ಈ ಮೂಲಕ 500 ವರ್ಷಗಳ ಹಿಂದೆ ಜನಿಸಿದ ಕನಕದಾಸರು ಇಂದಿಗೂ ಪ್ರಸ್ತುತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜಗದೀಶ್‌ ಹೇಳಿದರು.

Advertisement

ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲಾಧಿಕರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗದಲ್ಲಿ ಜನಿಸಿದ ಕನಕದಾಸರು ಇಡೀ ಮಾನವ ಕುಲದ ಸುಧಾರಣೆಗೆ ಪ್ರಯತ್ನಿಸಿದ್ದು ನೆನೆದರೆ ರೋಮಾಂಚನವಾಗುತ್ತದೆ. ಕನಕದಾಸರ ಕೀರ್ತನೆಗಳು ಮಾನವ ಜೀವನ ಹೇಗೆ ಸರಿಯಾದ ದಾರಿಯಲ್ಲಿ ನಡೆಯಬೇಕು ಎನ್ನುವುದನ್ನು ತಿಳಿಸುತ್ತವೆ. ಅವರ ಚಿಂತನೆ, ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಕನಕದಾಸರ ಕುರಿತು ನಿವೃತ್ತ ಉಪನ್ಯಾಸಕ ಮೇಟಿ ಮುದಿಯಪ್ಪ ಉಪನ್ಯಾಸ ನೀಡಿ ದಾಸರಲ್ಲಿ ಶ್ರೇಷ್ಠರಾದ ಕನಕದಾಸರು ಒಬ್ಬ ರಾಷ್ಟ್ರ ಸಂತರು, ಅವರ ಕೀರ್ತನೆಗಳು ಗ್ರಾಮೀಣ ಜನತೆಗೂ ಸಹ ಸುಲಭದಲ್ಲಿ ಅರ್ಥವಾಗುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಪೂರ್ಣಿಮಾ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next