Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕನಕದಾಸರ ಜಯಂತ್ಯುತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಚೇರಿಗಳಲ್ಲಿ ಪೂಜೆ ಕಾರ್ಯಕ್ರಮದ ಬಳಿಕ ಎಲ್ಲ ಅಧಿಕಾರಿಗಳು ನೇರವಾಗಿ ಬೊಮ್ಮಗೊಂಡೇಶ್ವರ ವೃತ್ತಕ್ಕೆ ಆಗಮಿಸಬೇಕು. ಸಮಾಜದ ಬಾಂಧವರು ಹೆಚ್ಚು ಸಂಖ್ಯೆಯಲ್ಲಿ ಸೇರಿ ವಿಜೃಂಭಣೆಯಿಂದ ಜಯಂತಿ ಆಚರಣೆಗೆ ಸಹಕಾರಿಸಬೇಕು ಎಂದರು. ಮೆರವಣಿಗೆಯಲ್ಲಿ 2 ಕಲಾ ತಂಡಗಳು ಹಾಗೂ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದಾಸರ ಪದಗಳ ಹಾಡಿಗೆ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸುತೋ¤ಲೆ ಮೂಲಕ ತಿಳಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು. ನಗರದ ಬರೀದ್ ಶಾಹಿ ವೃತ್ತದಲ್ಲಿ ಇಲ್ಲವೇ ನಗರದ ಪ್ರಮುಖ ಸ್ಥಳವೊಂದರಲ್ಲಿ ಕನಕದಾಸರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಮುಖಂಡ ಸಂತೋಷ ಜೋಳದಾಪಕೆ ಸಭೆಗೆ ತಿಳಿಸಿದರು. ತಮ್ಮ ಬೇಡಿಕೆಯನ್ನು ಸರ್ಕಾರಕ್ಕೆ ತಿಳಿಸಲಾಗುವುದು. ಈ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಲು ಮತ್ತು ಇದಕ್ಕೆ ಅನುಮತಿ ನೀಡಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೇ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಕಾರಿಗಳು ತಿಳಿಸಿದರು.
Related Articles
Advertisement
ನಿಬಂಧ ಸ್ಪರ್ಧೆ: ಕನಕದಾಸರ ಜೀವನಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಸಮಾಜದ ಮುಖಂಡರಾದ ಅಮೃತರಾವ್ ಚಿಮಕೋಡ, ಮಲ್ಲಿಕಾರ್ಜುನ ಬಿರಾದಾರ, ಮಾಳಪ್ಪ ಅಡಸಾರೆ, ವಿಜಯಕುಮಾರ್ ಸೋನಾರೆ, ಲಕ್ಷ್ಮಣ ಮೇತ್ರೆ, ತುಕಾರಾಮ ಚಿಮಕೋಡೆ, ಕೆ.ಡಿ. ಗಣೇಶ ಹಾಗೂಇತರರು ಇದ್ದರು.