Advertisement

ಲಕ್ಷ್ಮೀ ನರಸಿಂಹ ಸ್ವಾಮಿಗೆ ವಿಶೇಷ ಪೂಜೆ 

04:11 PM Nov 08, 2018 | |

ಕನಕಗಿರಿ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಕನಕಾಚಲ ಲಕ್ಷ್ಮೀ ನರಸಿಂಹ ಸ್ವಾಮಿಯ ಸನ್ನಿಧಿಗೆ ಬುಧವಾರ ದೀಪಾವಳಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಹಸ್ರಾರು ಭಕ್ತರು ಸರದಿ, ಸಾಲಿನಲ್ಲಿ ನಿಂತು ಲಕ್ಷ್ಮೀ ನರಸಿಂಹ ಸ್ವಾಮಿಯ ದರ್ಶನ ಪಡೆದರು. 

Advertisement

ದೇವರ ಸನ್ನಿಧಿಯಲ್ಲಿ ಬೆಳಗ್ಗೆ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಂತರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಮಾತನಾಡಿ, ನಿತ್ಯ ಕಾರ್ತಿಕ ಅಮವಾಸ್ಯೆವರೆಗೆ ವಿಶೇಷ ಕಾರ್ತಿಕೋತ್ಸವ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗಿ ಎಂದರು. ಕಾರ್ಯದರ್ಶಿ ಸಿದ್ಧಲಿಂಗಯ್ಯಸ್ವಾಮಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next