ಅಹಮದಾಬಾದ್: ಐಪಿಎಲ್ ಸೀಸನ್ 16ರ ಮೊದಲ ಪಂದ್ಯದಲ್ಲೇ ಜಯ ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಎರಡನೇ ಪಂದ್ಯಕ್ಕೆ ಸಿದ್ದತೆ ನಡೆಯತ್ತಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದೆ.
ಮೊದಲ ಪಂದ್ಯದಲ್ಲೇ ಗಾಯಗೊಂಡಿದ್ದ ಅನುಭವಿ ಆಟಗಾರ ಕೇನ್ ವಿಲಿಯಮ್ಸನ್ ಅವರು ಸಂಪೂರ್ಣ ಕೂಟದಿಂದಲೇ ಹೊರಬಿದ್ದಿದ್ದಾರೆ. ಈ ಬಗ್ಗೆ ಗುಜರಾತ್ ತಂಡ ಖಚಿತಪಡಿಸಿದೆ.
ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರುತುರಾಜ್ ಗಾಯಕ್ವಾಡ್ ಬಾರಿಸಿದ ಚೆಂಡನ್ನು ಹಿಡಿಯುವ ಪ್ರಯತ್ನದಲ್ಲಿ ವಿಮಿಯಮ್ಸನ್ ಗಾಯಗೊಂಡರು. ನೋವಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಅವರು ಆಟಕ್ಕೆ ಮರಳಲಿಲ್ಲ. ಅವರ ಬದಲಿಗೆ ಸಾಯಿ ಸುದರ್ಶನ್ ಅವರು ಇಂಪಾಕ್ಟ್ ಆಟಗಾರ ರೂಪದಲ್ಲಿ ಬಂದರು.
ಇದನ್ನೂ ಓದಿ:ನೀಲಿ ಚಿತ್ರದಲ್ಲಿ ನಟಿಸ್ತೀರಾ? ಸಂದರ್ಶನದಲ್ಲಿ ಕನ್ನಡದ ನಟಿಗೆ ಯೂಟ್ಯೂಬರ್ ಪ್ರಶ್ನೆ
Related Articles
ಪಂದ್ಯಾವಳಿಯ ಆರಂಭದಲ್ಲಿ ಕೇನ್ ರನ್ನು ಗಾಯದಿಂದ ಕಳೆದುಕೊಂಡಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ” ಎಂದು ಟೈಟಾನ್ಸ್ ಕ್ರಿಕೆಟ್ ನಿರ್ದೇಶಕ ವಿಕ್ರಮ್ ಸೋಲಂಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೈಟಾನ್ಸ್ ಇನ್ನೂ ಬದಲಿ ಆಟಗಾರನನ್ನು ಹೆಸರಿಸಿಲ್ಲ ಆದರೆ ಮುಂದಿನ ದಿನಗಳಲ್ಲಿ ಪ್ರಕಟಣೆಯನ್ನು ಮಾಡಲಾಗುವುದು ಎಂದು ಹೇಳಿದರು.