ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತು ನಟಿ ಕಂಗನಾ ರಣಾವುತ್ ನಡುವಿನ ಜಟಾಪಟಿಯ ಮುಂದಿನ ಹಂತವಾಗಿ ಬಾಲಿವುಡ್ ನಟಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಲಿದ್ದಾರೆ.
ಇಂದು ಸಂಜೆ 4.30ಕ್ಕೆ ರಾಜಭವನದಲ್ಲಿ ಕಂಗನಾ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ನಂತರ ಕಂಗನಾ ತಮ್ಮ ಹುಟ್ಟೂರು ಹಿಮಾಚಲ ಪ್ರದೇಶಕ್ಕೆ ವಿಮಾನದ ಮೂಲಕ ತೆರಳಲಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ನಂತರ ಬಾಲಿವುಡ್ ನ ನೆಪೊಟಿಸಂ ನ ಬಗ್ಗೆ ಕಂಗನಾ ಧ್ವನಿ ಎತ್ತಿದ್ದರು. ನಂತರ ಡ್ರಗ್ ಮಾಫಿಯಾದ ವಿರುದ್ಧವೂ ನಟಿ ಮಾತನಾಡಿದ್ದು, ಮಹಾರಾಷ್ಟ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯ ಮೇಲೆ ನೇರ ವಾಗ್ದಾಳಿ ನಡೆಸಿದ್ದ ಕಂಗನಾ ಮುಂಬೈಗೆ ಆಗಮಿಸಿದ್ದಾಗ ಮಹಾ ಡ್ರಾಮವೇ ನಡೆದಿತ್ತು.
ಇದನ್ನೂ ಓದಿ: ಉಸಿರಾಟದ ಸಮಸ್ಯೆಯಿಂದ ಮತ್ತೆ ಏಮ್ಸ್ ಗೆ ದಾಖಲಾದ ಗೃಹ ಸಚಿವ ಅಮಿತ್ ಶಾ
ಕಂಗನಾ ರಣಾವುತ್ ಗೆ ಜೀವ ಬೆದರಿಕೆ ಒಡ್ಡಿದ ಹಿನ್ನಲೆಯಲ್ಲಿ ಅವರಿಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ. ಇಂದಿನ ರಾಜ್ಯಪಾಲರ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ.