ನವದೆಹಲಿ : ಮೈಕ್ರೊ ಬ್ಲಾಗಿಂಗ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ಟ್ವೀಟ್ ಮಾಡಿದ ಕಾರಣ ನಟಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಸರಣಿ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ನಟಿಯ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ.
2021ರ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಟಿಎಂಸಿ ಗೆದ್ದಿದೆ. ಇದೇ ಹಿನ್ನೆಲೆಯಲ್ಲಿ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತವನ್ನು ತರಬೇಕು ಎಂದು ಕಂಗನಾ ಒತ್ತಾಯ ಮಾಡಿದ್ದಾರೆ. ಅಲ್ಲದೆ ಅಸ್ಸಾಂ ಮತ್ತು ಪುದುಚೆರಿಯಲ್ಲಿ ಯಾವುದೇ ಹಿಂಸಾಚಾರ ಆಗಿಲ್ಲ. ಆದ್ರೆ ಬಂಗಾಳದಲ್ಲಿ ಹಿಂಸಾಚಾರ ನಡೆದಿದೆ ಎಂದು ಟೀಕೆ ಮಾಡಿದ್ದರು.
ಇಷ್ಟೆ ಅಲ್ಲದೆ ಮಾಜಿ ಪ್ರಧಾನಿ ಜವಹರ ಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಬಗ್ಗೆ ಟ್ವಿಟ್ಟರ್ ನಲ್ಲಿ ಕಮೆಂಟ್ ಮಾಡಿದ್ದರು.
ಪಶ್ಚಿಮ ಬಂಗಾಳದಲ್ಲಿ 2000 ನೇ ಇಸವಿಯಿಂದ ಮಮತಾ ಬ್ಯಾನರ್ಜಿಯ ವಿರಾಟ ರೂಪವನ್ನು ಬಳಕೆ ಮಾಡಿಕೊಂಡಿದ್ದಾರೆ. ಈ ಕಾರಣದಿಂದ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಘೊಷಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ನಟಿ ಕಂಗನಾ ರಣಾವತ್ ಟ್ವೀಟ್ ಮೂಲಕ ಕೇಳಿದ್ದರು.