Advertisement

ಸದ್ದು ಮಾಡುತ್ತಿದೆ ಸೂರ್ಯ ನಟನೆಯ ‘ಕಂಗುವ’ ಟೀಸರ್

04:59 PM Jul 24, 2023 | Team Udayavani |

ಸೂರ್ಯ ನಟನೆಯ “ಕಂಗುವ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಸೂರ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಟೀಸರ್‌ ಬಿಡುಗಡೆ ಮಾಡಿ ಶುಭಕೋರಿದೆ. ಕೆ.ಇ. ಜ್ಞಾನವೇಲ್‌ ರಾಜ “ಕಂಗುವ’ ಚಿತ್ರವನ್ನು ತಮ್ಮ ಸ್ಟೂಡಿಯೋ ಗ್ರೀನ್‌ ಸಂಸ್ಥೆಯಡಿ ನಿರ್ಮಿಸುತ್ತಿದ್ದಾರೆ.

Advertisement

ಈಗಾಗಲೇ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಏಕಕಾಲಕ್ಕೆ 10 ಭಾಷೆಗಳಲ್ಲಿ, 3 ಡಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಈಗ ಬಿಡುಗಡೆಯಾಗಿರುವ ಟೀಸರ್‌ ತಮಿಳು, ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲೀಷ್‌ ಸೇರಿದಂತೆ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಸದ್ಯದಲ್ಲೇ ಇನ್ನೂ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

“ಕಂಗುವ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಚಿತ್ರ ಮೂಡಿಬರುತ್ತಿರುವ ರೀತಿಗೆ ಚಿತ್ರತಂಡ ಖುಷಿಯಾಗಿದೆ. ಸದ್ಯದಲ್ಲೇ ಚಿತ್ರೀಕರಣ ಮುಗಿಯಲಿದ್ದು, 2024ರಲ್ಲಿ ಚಿತ್ರ ಜಗತ್ತಿನಾದ್ಯಂತ ದಾಖಲೆಯ 10 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next